
ಅಲ್ಪ ಸಂಖ್ಯಾತ ವರ್ಗಕ್ಕೆ ಸೇರಿದ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಮೀಸಲಾತಿಯನ್ನು ರದ್ದು ಪಡಿಸಿದ ರಾಜ್ಯ ಸರ್ಕಾರದ ತೀರ್ಮಾನ ಅತ್ಯಂತ ಖಂಡನೀಯ. ಸರ್ಕಾರ ಕೂಡಲೇ ಈ ತೀರ್ಮಾನ ವನ್ನು ಹಿಂಪಡೆಯ ಬೇಕೆಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮಾಜಿ ಅಧ್ಯಕ್ಷ ಎಂ. ಪಿ. ಮೊಯಿದಿನಬ್ಬ ಆಗ್ರಹಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿದ ಅವರು ಮುಸ್ಲಿಂ ಸಮುದಾಯಕ್ಕೆ ಹಿಂದುಳಿದ ವರ್ಗದ ಪ್ರವರ್ಗ 2ಬಿ ಅಡಿಯಲ್ಲಿ ಇದ್ದ ಶೇಕಡಾ 4 ಮೀಸಲಾತಿ ಯನ್ನು ಹಿಂಪಡೆದು ಇನ್ನೊಂದು ಸಮುದಾಯಕ್ಕೆ ನೀಡುವ ಮೂಲಕ ರಾಜ್ಯ ಸರ್ಕಾರ ವು ಸಮುದಾಯಗಳ ನಡುವೆ ದ್ವೇಷದ ಕಿಡಿ ಹೊತ್ತಿಸಿ ಮುಂದಿನ ಚುನಾವಣೆಯಲ್ಲಿ ಮತ ಗಳಿಸುವ ಕೆಟ್ಟ ಯೋಚನೆ ಮಾಡಿದೆ ಎಂದು ಮೊಯಿದಿನಬ್ಬ ತಿಳಿಸಿದ್ದಾರೆ.

