
ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಎಣ್ಣೆ ಸೋರಿಕೆಗೊಂಡ ಹಿನ್ನೆಲೆಯಲ್ಲಿ ಹಲವಾರು ದ್ವಿಚಕ್ರ ವಾಹನ ಸವಾರರು ಮಗುಚುವಿದ್ದ ಘಟನೆ ಗುರುವಾರ ಸಂಜೆ ನಡೆದಿದೆ ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ಖಾಸಗಿ ಬಸ್ಸಿನಿಂದ ತೈಲ ರಸ್ತೆಯಲ್ಲಿ ಸೋರಿಕೆಗೊಂಡು ಸ್ಥಳದಲ್ಲಿ ವ್ಯಾಪಿಸಿದ್ದು ಹಲವಾರು ಬೈಕು ಸವಾರರು ಮಗುಚಿ ಬಿದ್ದಿದ್ದರು ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಗಳು ಉಡುಪಿಯ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ರಸ್ತೆಗೆ ನೀರು ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು

