×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಮನೆ ಮಂದಿ ಪಾರು

ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಸಮೀಪದ ಹರೇಕಳ ಗ್ರಾಮದ ದೇರಿಕಟ್ಟೆ ನಿವಾಸಿ ದಿ. ಅಬ್ದುಲ್ ಖಾದ್ರಿ ಅವರ ಪತ್ನಿ ನೆಬಿಸಾ ಎಂಬವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಹಂಚಿನ ಮನೆಯು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ರಂಝಾನ್ ಉಪವಾಸದ ಪ್ರಯುಕ್ತ ಇಫ್ತಾರ್’ನಲ್ಲಿ ನಿರತವಾಗಿದ್ದ ಮನೆಯವರ ಸಮಯ ಪ್ರಜ್ಞೆಯಿಂದ ಪ್ರಾಣ ಹಾನಿಯಾಗಿಲ್ಲ, ಆದರೆ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಮನೆಯ ಪೀಠೋಪಕರಣಗಳು, ಪಾತ್ರೆಗಳು, ವಿದ್ಯುತ್ ಉಪಕರಣಗಳು, ಗೃಹ ಉಪಯೋಗಿ ಪರಿಕರಗಳು, ಮಕ್ಕಳ ಶಾಲಾ ಪಠ್ಯ ಪುಸ್ತಕ ಇನ್ನಿತರ ವಸ್ತುಗಳು ಸಂಪೂರ್ಣ ಭಸ್ಮಗೊಂಡಿದೆ.

Leave a Reply

Your email address will not be published. Required fields are marked *