
ಉಡುಪಿ ವಿಧಾನಸಭಾ ಕೇತ್ರದಿಂದ ಟಿಕೆಟ್ ವಂಚಿತರಾಗಿದ್ದ ಯುವ ನಾಯಕ ಕೆ. ಕೃಷ್ಣಮೂರ್ತಿ ಆಚಾರ್ಯರು ಇಂದು ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ. ಕೃಷ್ಣಮೂರ್ತಿ ಆಚಾರ್ಯರು ಇಂದು ಮೊದಲಿಗೆ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ, ಕನ್ನಾರ್ಪಾಡಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಸಹಸ್ರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರೊಂದಿಗೆ ಉಡುಪಿ ತಾಲೂಕು ಕಚೇರಿಯಲ್ಲಿ ಪಕ್ಷೇತರ ಸ್ವಾಭಿಮಾನಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

