×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನ ಸಮದ್ ನಾಮ ಪತ್ರ ಸಲ್ಲಿಕೆ

ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಬೀನ ಸಮದ್ ಬುಧವಾರ ಪಕ್ಷದ ಮುಖಂಡರು ಹಾಗೂ ನುರಾರು ಮಂದಿ ಕಾರ್ಯಕರ್ತರು,ಅಭಿಮಾನಿಗಳೊಂದಿಗೆ ಆಗಮಿಸಿ ಕಾಪು ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ನಮ್ಮ ಪಕ್ಷ ಈ ಬಾರಿ  ಸಮಾಜಮುಖಿ ಕೆಲಸ ಕಾರ್ಯಗಳನ್ನು ನಡೆಸುತ್ತಿರುವ ಸಮರ್ಥ ಅಭ್ಯರ್ಥಿ ಸಬೀನ ಸಮದ್ ರವರನ್ನು ಕಣಕಿಳಿಸಿದ್ದು, ಅವರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. .ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣತೊಡುದಾಗಿ ಅಭ್ಯರ್ಥಿ ಸಬೀನ ಸಮದ್ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ,ರಾಜ್ಯ ಕಾರ್ಯದರ್ಶಿ ಸುದಾಕರ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್,ಕಾರ್ಯದರ್ಶಿ ಜಯರಾಮ ಆಚಾರ್ಯ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *