
ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ ವಿ ಸುನಿಲ್ ಕುಮಾರ್ ಅವರ ನಾಮಪತ್ರ ಸಲ್ಲಿಕೆಯ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರು ಪಾಲ್ಗೊಂಡು ಅಭ್ಯರ್ಥಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರವಿಕುಮಾರ್, ಉಡುಪಿ ಶಾಸಕರಾದ ಶ್ರೀ ಕೆ ರಘುಪತಿ ಭಟ್, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಟ್ಟಾರ್ ರತ್ನಾಕರ್ ಹೆಗ್ಡೆ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

