×
Our website is made possible by displaying online advertisements to our visitors. Please consider supporting us by whitelisting our website.
  • 9880645340

2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಯಾದಗಿರಿಗೆ ಕೊನೆಯ ಸ್ಥಾನ

ಇಂದು 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಹಾಗೆಯೇ ಉಡುಪಿ ಜಿಲ್ಲೆಗೆ 2 ನೇ ಸ್ಥಾನ, ಕೊಡಗಿಗೆ 3ನೇ ಸ್ಥಾನ, ಉತ್ತರ ಕನ್ನಡ 4ನೇ ಸ್ಥಾನದಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ 9ನೇ ಸ್ಥಾನದಲ್ಲಿದ್ದರೆ, ಬೆಂಗಳೂರು ದಕ್ಷಿಣ ಜಿಲ್ಲೆ 10ನೇ ಸ್ಥಾನದಲ್ಲಿದೆ. ಬೆಂಗಳೂರು ಉತ್ತರ ಜಿಲ್ಲೆ 11ನೇ ಸ್ಥಾನದಲ್ಲಿದೆ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ ಯಾದಗಿರಿಗೆ (78.97%) ಕೊನೆಯ ಸ್ಥಾನ ಸಿಕ್ಕಿದೆ. ಎಂದಿನಂತೆ ಬಾಲಕೀಯರೇ ಮೇಲುಗೈ ಸಾಧಿಸಿದ್ದು 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್‌ ಆಗಿದ್ದಾರೆ. ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

Leave a Reply

Your email address will not be published. Required fields are marked *