
ಹೂಡೆ ಸಮೀಪದ ಕುಕ್ಕುಡೆ ಕುದ್ರು ನದಿಯಲ್ಲಿ ದೋಣಿ ಮಗುಚಿದ ಪರಿಣಾಮ ವಾಯು ವಿಹಾರಕ್ಕೆ ಹೋಗುತ್ತಿದ್ದ ನಾಲ್ವರು ಯುವಕರು ನೀರು ಪಾಲಾಗಿ ಮೂವರು ಪಾರಾಗಿರುವ ಘಟನೆ ಇಂದು ಸಂಜೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕುಡೆ ಕುದ್ರು ಎಂಬಲ್ಲಿ ನಡೆದಿದೆ ನೀರುಪಾಲಾದವರನ್ನು ಹೂಡೆಯ ಫೈಝಾನ್ ಹಾಗೂ ಇಬಾದ್ ಮತ್ತು ಇವರ ಸಂಬಂಧಿ ತೀರ್ಥಹಳ್ಳಿಯ ಯುವಕರು ಎಂದು ಗುರುತಿಸಲಾಗಿದೆ. ರಂಜಾನ್ ರಜೆ ಹಿನ್ನೆಲೆಯಲ್ಲಿ ತೀರ್ಥಳ್ಳಿಯ ಯುವಕರು ಹೂಡೆ ಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಆಗಮಿಸಿದ್ದರು ಅಲ್ಲಿಂದ ಒಟ್ಟು ಏಳು ಮಂದಿ ವಾಯುವಿಹಾರಕ್ಕೆಂದು ಹೂಡೆಯ ಗುಡ್ಡೇರಿ ಕಂಬಳದಿಂದ ಕುಕ್ಕುಡೆ ಕುದ್ರುವಿಗೆ ದೋಣಿಯಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ ಈ ವೇಳೆ ದೋಣಿ ಮಗುಚಿ ಬಿದ್ದ ಪರಿಣಾಮ ಏಳು ಮಂದಿ ನೀರಿಗೆ ಬಿದ್ದರು. ಇದರಲ್ಲಿ ಮೂವರು ಈಜಿ ಕೊಂಡು ಕುದ್ರುವಿಗೆ ಸೇರಿಕೊಂಡರು. ಉಳಿದ ನಾಲ್ವರು ನೀರಿನಲ್ಲಿ ಮುಳುಗಿ ಮತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ ಸ್ಥಳೀಯರು ಹಾಗೂ ಪೊಲೀಸರು ಹುಡುಕಾಟ ನಡೆಸಿದಾಗ ಮೂರು ಮೃತ ದೇಹಗಳು ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ಮುಂದುವರೆದಿದೆ

