×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸಂವಿಧಾನವನ್ನು ರಕ್ಷಣೆ ಮಾಡುವವರಿಗೆ ಮತ ಹಾಕಬೇಕೇ ಹೊರತು, ಸಂವಿಧಾನ ನಾಶಪಡಿಸುವವರಿಗಲ್ಲ – ಜ್ಞಾನ ಪ್ರಕಾಶ ಸ್ವಾಮೀಜಿ

ನಾವು ಸಂವಿಧಾನವನ್ನು ರಕ್ಷಣೆ ಮಾಡುವವರಿಗೆ ಮತ ಹಾಕಬೇಕೇ ಹೊರತು, ಸಂವಿಧಾನ ನಾಶಪಡಿಸುವವರಿಗಲ್ಲ. ಸಂವಿಧಾನ ಶೋಷಿತರನ್ನು ರಾಷ್ಟ್ರಪತಿಯನ್ನಾಗಿ ಮಾಡಿದರೆ, ಮನುವಾದ ಗುಲಾಮರನ್ನಾಗಿ ಮಾಡುತ್ತದೆ. ಇಂದು ದೇಶದ ಪ್ರಜಾಪ್ರಭುತ್ವ ದಿವಾಳಿಯಾಗಿದೆ.” ಎಂದು ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದ್ದಾರೆ. ಅವರು ಭಾನುವಾರ ದಿ.23/4/23 ರಂದು ಕರ್ನಾಟಕ ದಲಿತ ಸಂಘ ಸಮಿತಿಗಳ ಐಕ್ಯ ಹೋರಾಟ ಸಮಿತಿ ಉಡುಪಿ ಜಿಲ್ಲೆಯ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರ 132 ನೇ ಯ ಜನ್ಮದಿನಾಚರಣೆಯ ಪ್ರಯುಕ್ತ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವಿಧಾನಸಭಾ ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದಿವಾಕರ್ ಕುಂದರ್, ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಬಸವಾನಂದ ಸ್ವಾಮೀಜಿ, ಕರ್ನಾಟಕ ಜನಶಕ್ತಿಯ ಮಲ್ಲಿಗೆ ಸಿರಿಮನೆ, ಮೈಸೂರು ವಿ.ವಿ ಮಹಾನಿರ್ದೇಶಕ ಕೆ.ಪಿ ಮಹಾಲಿಂಗ, ಚಿಂತಕ ಫ್ರೊ. ಫಣಿರಾಜ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *