×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು: ಗುರ್ಮೆ ಸುರೇಶ್ ಶೆಟ್ಟಿ ಶಾಸಕರ ಜೊತೆಗೂಡಿ ವಿವಿಧೆಡೆ ಮತ ಯಾಚನೆ

ಕಾಪು: ಕಾಪು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಶಾಸಕ ಲಾಲಾಜಿ ಮೆಂಡನ್ ಜೊತೆಗೂಡಿ ವಿವಿಧೆಡೆ ಮತ ಯಾಚಿಸಿದರು. ತೆಂಕ ಗ್ರಾಮ ಪಂಚಾಯತ್, ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ಕೈಗೊಂಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಯಡಿಯೂರಪ್ಪ ಹಾಗು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಮಾಡಿದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿದರು. ಸರಕಾರ ಒದಗಿಸುತ್ತಿರುವ ಸವಲತ್ತುಗಳು ಅರ್ಹರನ್ನು ತಲುಪುತ್ತಿರುವ ಬಗೆಯನ್ನು ವಿವರಿಸಿದರಲ್ಲದೆ ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಗಳಿಸುವಂತಾಗಲು ತಮಗೆ ಮತ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭ ಗ್ರಾಮ ಪಂಚಾಯತಿ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರ ಜೊತೆಗಿದ್ದರು.

Leave a Reply

Your email address will not be published. Required fields are marked *