
ಕಟಪಾಡಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಚುನಾವಣಾ ಸಮಾವೇಶ ದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲಾತಿಯನ್ನು ವಾಪಸ್ ಪುನಹ ತರುತ್ತದೆ ಬಿಜೆಪಿ ಸರಕಾರ ಬಂದರೆ ಮುಸ್ಲಿಂ ಮೀಸಲಾತಿಯನ್ನು ಯಾವತ್ತೂ ತರುವುದಿಲ್ಲ ಕಾಂಗ್ರೆಸ್ ಪಕ್ಷವು ದೇಶದ ಸುರಕ್ಷತೆಯನ್ನು ವೋಟ್ ಬ್ಯಾಂಕ್ ರಾಜಕೀಯದ ಮಾಡುತ್ತದೆ ಬಿಜೆಪಿ ಪಕ್ಷವು ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆ ಇಲ್ಲ ಪಿ ಎಫ್ ಐ ಬ್ಯಾನ್ ಮಾಡಿ ದಕ್ಷಿಣ ಭಾರತವನ್ನು ಸುರಕ್ಷಿತವಾಗಿಸಿದ್ದೇವೆ ಎಂದು ತಿಳಿಸಿದರು ಈ ಸಂದರ್ಭ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಚುನಾವಣಾ ಪ್ರಭಾರಿ ವಿಜೇಂದ್ರ ಗುಪ್ತ, ಶಾಸಕರಾದ ಲಾಲಾಜಿ ಆರ್ ಮೆಂಡನ್, ರಘುಪತಿ ಭಟ್, ಬಿಜೆಪಿ ಅಭ್ಯರ್ಥಿಗಳಾದ ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಪ್ರಮೋದ್ ಮಂಜರಾಜ್, ಗೀತಾಲಿ ಸುವರ್ಣ, ಶಿಲ್ಪಾಜಿ ಸುವರ್ಣ, ದಿನಕರ ಬಾಬು ಮುಂತಾದವರು ಉಪಸ್ಥಿತರಿದ್ದರು

