×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ಕ್ಷೇತ್ರದಲ್ಲಿ ಗುರ್ಮೆ ಸುರೇಶ್ ಶೆಟ್ಟಿಯವರ ವಿಜಯೋತ್ಸವ ಕಾರ್ಯಕ್ರಮ

ಕಾಪು ಕ್ಷೇತ್ರದಲ್ಲಿ ಬಹುಮತದಿಂದ ಗೆದ್ದ ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿಯವರ ವಿಜಯೋತ್ಸವ ಕಾರ್ಯಕ್ರಮ .ಕಾಪು ವಿಧಾನ ಸಭಾ ಕ್ಷೇತ್ರದ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಮೆರವಣಿಗೆ ವಿಜಯೋತ್ಸವದಲ್ಲಿ ಪಾಲ್ಗೊಂಡ ಪಕ್ಷದ ಪ್ರಮುಖರು, ಕಾರ್ಯಕರ್ತರು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅದ್ದೂರಿ ಗೆಲುವು ಸಾಧಿಸಿ,ಬಿಜೆಪಿಯಿಂದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ವಿಜಯೋತ್ಸವ ಕಾರ್ಯಕ್ರಮ ಇಂದು ಶನಿವಾರ ನಡೆಯಿತು.ಈ ವಿಜಯೋತ್ಸವದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.ಇನ್ನು ಕಾಪು ತಾಲೂಕಿನ ಪಡುಕೆರೆಯಿಂದ ಆರಂಭಗೊಂಡ ಈ ವಿಜಯೋತ್ಸವ ಯಾತ್ರೆಯು ಕಟಪಾಡಿ, ಉದ್ಯಾವರ, ಶಿರ್ವ, ಪಡುಬಿದ್ರಿ ಮೂಲಕ ಸಾಗಿ ಬಳಿಕ ಕಾಪುವಿಗೆ ಬಂದು ನಂತರ ಕಳತ್ತೂರು ಸಭಾಭವನದಲ್ಲಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಅಭಿನಂದನೆ ನಡೆಯುವ ಮೂಲಕ ಕಾರ್ಯಕ್ರಮ ಸಮಾಪನಗೊಂಡಿತು. ಈ ವಿಜಯೋತ್ಸವದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್. ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ , ಕಾಪು ತಾಲೂಕು ಅಧ್ಯಕ್ಷ ಶ್ರೀಕಾಂತ್ ನಾಯಕ್ , ಮಹಿಳಾ ಮೋರ್ಚಾದ ಅಧ್ಯಕ್ಷ ವೀಣಾ ಶೆಟ್ಟಿ ಸೇರಿದಂತೆ ಇನ್ನಿತರ ಹಲವಾರು ಮಂದಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *