×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ ಭರವಸೆಗಳನ್ನು ಜಾರಿಗೆ ತರುವುದರ ಮೂಲಕ ನುಡಿದಂತೆ ನಡೆದಿದೆ – ರಮೇಶ್ ಕಾಂಚನ್

ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ ಭರವಸೆಗಳನ್ನು ಜಾರಿಗೆ ತರುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ. ಈ ಬಗ್ಗೆ ಅಪಪ್ರಚಾರದಲ್ಲಿ ನಿರತವಾಗಿದ್ದ ಬಿಜೆಪಿ ಇನ್ನಾದರೂ ಟೀಕೆ ಮಾಡುವುದುನ್ನು ನಿಲ್ಲಿಸಲಿ. ಹಿಂದೆ ಬಿಜೆಪಿ ಸರಕಾರ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಆದರೆ ಕಾಂಗ್ರೆಸ್ ಸರಕಾರ ಹೇಳಿದಂತೆ 5 ಭರವಸೆಗಳನ್ನು ಈಡೇರಿಸುವುದರ ಮೂಲಕ ನುಡಿದಂತೆ ನಡೆದಿದೆ. ಈ ಯೋಜನೆಗಳು ಎಲ್ಲಾ ಧರ್ಮ, ಜಾತಿ ಮತ್ತು ಪಕ್ಷಾತೀತವಾಗಿದ್ದು ರಾಜ್ಯ ಹಾಗೂ ಜಿಲ್ಲೆಯ ಜನತೆ ಇದರ ಪ್ರಯೋಜನ ಪಡೆಯಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *