×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರಾಜ್ಯ ಸರಕಾರದ ವಿರುಧ್ಧ ಕಾಪುವಿನಲ್ಲಿ ಪ್ರತಿಭಟನೆ.

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾಪು ಪೇಟೆಯಲಿ ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರಕಾರದ ವಿರುಧ್ಧ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಸರಕಾರ 200 ಯುನಿಟ್ ವಿದ್ಯುತ್ ಎಲ್ಲರಿಗೂ ಉಚಿತ ಎಂದು ಹೇಳಿ ಇದೀಗ ವಾರ್ಷಿಕ ಸರಾಸರಿಯ ಶೇ.10 ರಷ್ಟು ಹೆಚ್ಚು ಮಾತ್ರ ಉಚಿತ ಎಂದು ಹೇಳಿ ಜನರಿಗೆ ಕೊಟ್ಟ ವಚನ ಮುರಿದು ವಚನಭ್ರಷ್ಟ ರಾಗಿದ್ದಾರೆ, ಅಲ್ಲದೆ ಪ್ರತಿ ಯುನಿಟ್ ವಿದ್ಯುತ್ ಗೆ ಸುಮಾರು 70 ಪೈಸೆ ಯಷ್ಟು ವಿದ್ಯತ್ ದರ ಏರಿಸಿ ಜನವಿರೋಧಿ ನೀತಿ ತೋರಿಸಿದ್ದಾರೆ. ಇನ್ನು ಪಶುಸಂಗೋಪನಾ ಇಲಾಖೆಯ ಸಚಿವರಾದ ವೆಂಕಟೇಶ್ ರವರು ಗೋವುಗಳನ್ನು ಯಾಕೆ ಕಡಿಯಬಾರದು ಎಂದು ಹಿಂದೂಗಳ ಭಾವನೆಗಳ ಮೇಲೆ ಚೆಲ್ಲಾಟವಾಡುವ ಮಾತನ್ನಾಡಿದ್ದಾರೆ. ಗೋವುಗಳೆಂದರೆ ಭಾರತೀಯರಿಗೆ ಪರಮ‌ ಪವಿತ್ರವಾದದು. ಯಾವುದೇ ಕೆಲಸ ಶುಭಾರಂಭ ಮಾಡುವುದಾದರೆ ಮೊದಲು ಗೋಪೂಜೆ ಮಾಡುವರು. ಗ್ರಹಪ್ರವೇಶ ಮಾಡುವುದಾರೂ ಮೊದಲು ಗೋವನ್ನು ಪ್ರವೇಶ ಮಾಡಿಸಿ ನಂತರ ನಾವು ಪ್ರವೇಶ ಮಾಡುವೆವು. ಭಾರತೀಯರದ್ದ ಗೋವು ಆಧಾರಿತ ಕ್ರಷಿ ಜೀವನ ಪಧ್ಧತಿ ಇದ್ದುದು. ಅಂತಹ ಗೋವುಗಳನ್ನು ಕಡಿಯುವ ಮಾತನ್ನಾಡುವ ಮೂಲಕ ನಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವರು. ಈ ಕಾಯ್ದೆ ಹಿಂಪಡೆಯುವ ಪ್ರಯತ್ನ ಮಾಡಿದಲ್ಲಿ ಬಿಜೆಪಿ ಕಾರ್ಯಕರ್ತರು ನಿಮ್ಮ ಮುಂದಿನ ಎಲ್ಲ ಕಾರ್ಯಕ್ರಮಗಳಿಗೆ ಕಪ್ಟು ಬಾವುಟ ತೋರಿಸಿ ಪ್ರತಿಭಟನೆ ಮಾಡುವೆವು. ಗ್ರಾಮ ಗ್ರಾಮಗಳಲ್ಲಿ ಜನಜಾಗ್ರತಿ ಮೂಡಿಸುವೆವು ಎಂದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರದಾ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಮಾತನಾಡಿ, ವ್ರಧ್ಧ ಗೋವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆಗೆ ನಿಮ್ಮ ವ್ರಧ್ಧ ತಂದೆ ತಾಯಿ ಇದ್ದರೆ ಏನು ಮಾಡುವಿರೋ ಗೋವನ್ನೂ ಅದೇ ರೀತಿಯಲ್ಲಿ ನೋಡುವ ಸಂಸ್ಕ್ರತಿ ನಮ್ಮದು ಎಂದರು. ಚಕ್ರವರ್ತಿ ಸೂಲಿಬೆಲೆಗೆ ಜೈಲು ಸೇರಬೇಕಾದೀತು ಎನ್ನುವ ಸಚಿವ ಎಮ್ ಬಿ‌ ಪಾಟೀಲ್ ಹೇಳಿಕೆ ಖಂಡಿಸಲಾಗಿ ರಾಜ್ಯ ಸರಕಾರದ ಜನವಿರೋಧಿ ನೀತಿ ಬಿಡದಿದ್ದರೆ ದಿನಂಪ್ರತಿ ಹೋರಾಟಕ್ಕೂ ನಾವು ಸಿಧ್ಧ ಎನ್ನುವ ಎಚ್ಚರಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಪು‌ ಮಂಡಲ ಉಪಾಧ್ಯಕ್ಷರಾದ ನವೀನ್ ಎಸ್ ಕೆ, ಚಂದ್ರಶೇಖರ್ ಕೋಟ್ಯನ್, ಸುಧಾಮ ಶೆಟ್ಟಿ, ಮಂಡಲ ಪ್ರಧಾನ‌ಕಾರ್ಯದರ್ಶಿ ಗೋಪಾಲಕ್ರಷ್ಣ ರಾವ್, ಮಂಡಲ ಕಾರ್ಯದರ್ಶಿಗಳಾದ ಲತಾ ಆಚಾರ್ಯ, ಚಂದ್ರ ಮಲ್ಲಾರ್, ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಎಸ್ ಸಿ ಮೋರ್ಚ ಅಧ್ಯಕ್ಷರಾದ ಎಮ್ ಜಿ ನಾಗೇಂದ್ರ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಶೈಲೇಶ್, ಪ್ರಮುಖರಾದ ಶರಣ್ ಕುಮಾರ್ ಮಟ್ಟು, ಪ್ರವೀಣ್ ಶೆಟ್ಟಿ ಇನ್ನಂಜೆ, ದಿನೇಶ್ ಕೋಟ್ಯನ್, ಜಗದೀಶ್ ಮೆಂಡನ್, ಶೈಲೇಶ್ ಶೆಟ್ಟಿ, ರಮಾ ಶೆಟ್ಟಿ, ಗೌರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *