
ಉಡುಪಿ ಜಿಲ್ಲಾ ಪಂಚಾಯತ್ ಡಾll. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ದಿನಾಂಕ 14-06-2023 ರಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ಉಸ್ತುವಾರಿ ಸಮನ್ವಯ ಸಮಿತಿ (ದಿಶಾ) ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಇಲಾಖಾ ಮೇಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಸಭೆಯಲ್ಲಿ ಶಾಸಕರು ಮಾತನಾಡಿ ಪಡುಬಿದ್ರಿ ಹಾಗೂ ಹಿರಿಯಡ್ಕ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗುತ್ತಿದ್ದು ವೈಜ್ಞಾನಿಕವಾಗಿ ಕಾಮಗಾರಿಯನ್ನು ತುರ್ತು ನಿರ್ವಹಿಸಬೇಕು ಮತ್ತು ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಭಾಗಗಳಲ್ಲಿ ಕಡಲ ಕೊರೆತ ಉಂಟಾಗುತ್ತಿದ್ದು ಕಡಲ ಕೊರತ ಪೀಡಿತ ಪ್ರದೇಶಗಳ ಸ್ಥಳ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಉಡುಪಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಪೋಲಿಸ್ ವರಿಷ್ಠಾಧಿಕಾರಿಗಳಾದ ಹಾಕೆ ಅಕ್ಷಯ್ ಮಚ್ಚಿಂದ್ರ, ಪ್ರೊಫೆಷನರಿ ಐ.ಎ.ಎಸ್ ಯತೀಶ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

