×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಟಪಾಡಿ ಗ್ರಾಮ ಪಂಚಾಯತ್ ವತಿಯಿಂದ ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನೆ

ಕಾಪು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಕಟಪಾಡಿ ಗ್ರಾಮ ಪಂಚಾಯತ್ ವತಿಯಿಂದ ಇಂದು ದಿನಾಂಕ 14-06-2023 ರಂದು ಕಟಪಾಡಿ ಗ್ರಾಮ ಪಂಚಾಯತ್ ನ ಅಬ್ಬಕ್ಕ ಹೆಗ್ಗಡ್ತಿ ಸಭಾಭವನದಲ್ಲಿ ಅಭಿನಂದನಾ ಸಮಾರಂಭ ನೆರವೇರಿತು. ಸಭೆಯಲ್ಲಿ ಶಾಸಕರು ಕೇರಾ ಸುರಕ್ಷಾ ವಿಮಾ ಪತ್ರ ಹಾಗೂ ಸಾಮಾಜಿಕ ಭದ್ರತಾ ಸೌಲಭ್ಯಗಳಾದ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಆದೇಶ ಪತ್ರವನ್ನು ವಿತರಿಸಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಶಾಸಕರು ಮಾತನಾಡಿ ಜನ ನನ್ನ ಮೇಲೆ ವಿಶ್ವಾಸವಿಟ್ಟು ಮತ ಚಲಾಯಿಸಿ ನನ್ನನ್ನು ಗೆಲ್ಲಿಸಿದ್ದಾರೆ. ಅವರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಹೇಳಿದ ಅವರು ಕಟಪಾಡಿ ಗ್ರಾಮ ಪಂಚಾಯತ್ ನ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದರು. ಈ ಸಂದರ್ಭದಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಎಸ್ ಆಚಾರ್ಯ, ಉಪಾಧ್ಯಕ್ಷರಾದ ಅಬುಬಕ್ಕರ್, ಮುರ್ತೇದಾರರ ಸಂಘದ ಅಧ್ಯಕ್ಷರಾದ ಸದಾನಂದ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಮಮತಾ ಶೆಟ್ಟಿ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *