×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ದಿನಾಂಕ 17-06-2023 ರಂದು ಭೇಟಿ ನೀಡಿದರು. ಸಮುದಾಯ ಆರೋಗ್ಯ ಕೇಂದ್ರದ ಮೂಲಭೂತ ಸೌಕರ್ಯಗಳ ಬಗ್ಗೆ ಹಾಗೂ ಇತರೆ ಕುಂದು ಕೊರತೆಯ ಬಗ್ಗೆ ಚರ್ಚಿಸಿ ಆಸ್ಪತ್ರೆಗೆ ಬರುವ ರೋಗಿಗಳ ಬಗ್ಗೆ ಕಾಳಜಿ ವಹಿಸಿ ಮತ್ತು ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗ ಹೆಚ್ಚಾಗಲಿರುವುದರಿಂದ ಈ ಬಗ್ಗೆ ಸೂಕ್ತ ಮುಂಜಾಗ್ರತ ಕ್ರಮ ವಹಿಸುವಂತೆ ವೈದ್ಯಾಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾದ ದೇವದಾಸ್ ನಾಯಕ್, ಪ್ರವೀಣ್ ಪೂಜಾರಿ, ರಾಜೇಶ್ ಶೆಟ್ಟಿ, ಅನುಸೂಯ ಪೂಜಾರಿ, ಮಮತಾ ಶೆಟ್ಟಿ, ಶಾಲಿನಿ ಪೂಜಾರಿ, ಶಿರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಸುಶಾಂತ್ ಶೆಟ್ಟಿ ಕುತ್ಯಾರು, ಶಕ್ತಿಕೇಂದ್ರದ ಸಂತೋಷ್ ಶೆಟ್ಟಿ, ರವೀಂದ್ರ ಪಾಟ್ಕರ್, ಗಿರಿಧರ್ ಪ್ರಭು ಹಾಗೂ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಸುಬ್ರಹ್ಮಣ್ಯ ರಾವ್, ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ ಡಾ. ರಕ್ಷಿತಾ ಶೆಣೈ, ದಂತ ವೈದ್ಯಾಧಿಕಾರಿಗಳಾದ ಡಾ. ಗಾಯತ್ರಿ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *