×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ.

ಉಡುಪಿ: ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು ಪ್ರತಿಭಾ ಕಾರಂಜಿಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಮಕ್ಕಳ ಸಾಮರ್ಥ್ಯ ಪ್ರದರ್ಷಿಸಲು ಸರಕಾರವು ಉತ್ತಮ ಅವಕಾಶ ನೀಡಿದೆ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಸ್ತೂರಿ ಪ್ರವೀಣ್ ವಹಿಸಿದ್ದರು. ಈ ಸಂದರ್ಭ ಶಿಕ್ಷಣ ಸಂಯೋಜ ಶಂಕರ್ ಸುವರ್ಣ, ಶಿಕ್ಷಣ ಇಲಾಖಾಧಿಕಾರಿ ಶ್ರೀಮತಿ ಸುನೀತಾ,ಶೀಲಾ ಶೆಟ್ಟಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮಯ್ಯ, ಉದ್ಯಮಿಗಳಾದ ಸೀತಾರಾಮ್ ಶೆಟ್ಟಿ ಪುಚ್ಚೊಟ್ಟು ಗುತ್ತು, ಸುಧೀರ್ ಪೂಜಾರಿ ಶಾಲಾ ಮುಖ್ಯೋಪಾಧ್ಯಾಯನಿ ವಿನೋದ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *