ಮದರಂಗಡಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗಾಗಿ ಬುಧವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತೆ ನಮಿತಾರವರು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ಮೋಹಿನಿ ಸಿ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆ ಅಧಿಕಾರಿ ಗುರುಪ್ರಸಾದ್ ಕಾರ್ಯನಿರ್ವಹಿಸಿದರು. ಮುದರಂಗಡಿಯಲ್ಲಿ 15 ಸದಸ್ಯರ ಬೆಂಬಲ ಇದ್ದು, 10 ಬಿಜೆಪಿ ಹಾಗೂ 5 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ . ಅಧ್ಯಕ್ಷ ಸ್ಥಾನವು ಅನುಸೂಚಿತ ಮಹಿಳೆಗೆ ನಿಗದಿತವಾಗಿದ್ದರಿಂದ ಬಿಜೆಪಿಯಲ್ಲಿ ಅನುಸೂಚಿತ ಮಹಿಳೆ ಇಲ್ಲದ ಕಾರಣ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತೆಗೆ ಒಲಿದಿದೆ. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ನವೀನ್ ಚಂದ್ರ ಸುವರ್ಣ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡೇವಿಡ್ ಡಿ ಸೋಜ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಮೈಕಲ್ ರಮೇಶ್ ಡಿ ಸೋಜಾ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಸುನೀಲ್ ಕುಮಾರ್ ಮತ್ತಿತರರು ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭ ಹಾರೈಸಿದರು.

