×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬೆಳಪು ಸಹಕಾರಿ ಸಂಘದ ಅಮೃತ ಮಹೋತ್ಸವ ಸಹಕಾರಿ ಮಹಲ್ ಲೋಕಾರ್ಪಣೆ..

ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿನ ಬೆಳಪು ಸಹಕಾರಿ ಸಂಘದ ಅಮೃತ ಮಹೋತ್ಸವ ದ ಸಂದರ್ಭ ಉಚ್ಚಿಲದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಹಕಾರಿ ಮಹಲ್ ಲೋಕಾರ್ಪಣೆ ಹಾಗೂ ಸಹಕಾರಿ ರಂಗದ ಅಗ್ರಗಣ್ಯ ನಾಯಕ ಡಾ. ರಾಜೇಂದ್ರ ಕುಮಾರ್ ರವರಿಗೆ “ಸಹಕಾರಿ ಧ್ರುವ”. ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ ಎಂಬುದಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದ್ದಾರೆ.
ಅವರು ಬೆಳಪು ಸಿಎ ಬ್ಯಾಂಕ್ ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ 1948ರಲ್ಲಿ ಅಸ್ಥಿತ್ವಕ್ಕೆ ಬಂದಿರುವ ಬೆಳಪು ಸಹಕಾರಿ ಸಂಘ ಅಮೃತ ಮಹೋತ್ಸವದ ಹೊಸ್ತಿಲಲ್ಲಿದೆ. ಆ ಸವಿ ನೆನಪಿಗಾಗಿ ಉಚ್ಚಿಲದಲ್ಲಿ ನಿರ್ಮಿಸಲಾದ ಸಂಘದ ನವೀಕೃತ ಶಾಖೆ ಮತ್ತು ನೂತನ ಸಹಕಾರಿ ಮಹಲ್ ಕಟ್ಟಡ ಹಾಗೂ ಡಾ.ರಾಜೇಂದ್ರ ಕುಮಾರ್ ಕಾನ್ಫರೆನ್ಸ್ ಹಾಲ್, ಸಮೃದ್ಧಿ ಸಭಾಂಗಣ, ರೈತ ಬಂಧು ಕೃಷಿ ಸಲಕರಣೆ ಕೇಂದ್ರ, ರೈತ ಮಾರುಕಟ್ಟೆ ಮತ್ತು ಗೋದಾಮು ಹಸಗೂ ಪಡಿತರ ವಿತರಣಾ ವಿಭಾಗ, ಸಹಕಾರಿ ಸಭಾಂಗಣ, ನವೋದಯ ಸಭಾಂಗಣ, ನವೀಕೃತ ಹವಾನಿಯಂತ್ರಿತ ಬ್ಯಾಂಕಿಗ್ ಶಾಖೆ, ಸೇಫ್ ಲಾಕರ್ ಈ ಎಲ್ಲಾ ವ್ಯವಸ್ಥೆಗಳನ್ನು ಒಳಗೊಂಡಿರುವ ಕಟ್ಟಡ ಸೆ.ಎರಡರಂದ್ದು ಬೆಳಗ್ಗೆ 9-30ಕ್ಕೆ ಉದ್ಘಾಟನೆಗೊಳ್ಳಲಿದ್ದು ಕಾರ್ಯಕ್ರಮದ ಪೂರ್ವ ಭಾವಿಯಾಗಿ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಿಂದ ಉಚ್ಚಿಲ ಸಹಾಕಾರಿ ಮಹಲ್ ವರಗೆ ಮೆರವಣಿಗೆ ಸಾಗಿ ಬರಲಿದೆ ಎಂದರು. ಈ ಅಭೂತಪೂರ್ವ ಕಾರ್ಯಕ್ರಮಕ್ಕೆ ರಾಜ್ಯ ಮಂತ್ರಿ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಡಾ. ಜಿ. ಶಂಕರ್, ಜಯಕರ ಶೆಟ್ಟಿ ಇಂದ್ರಾಳಿ ಮುಂತಾದ ಗಣ್ಯರು ಭಾಗವಹಿಸಲಿ
ದ್ದಾರೆ ಎಂದರು. ಸುದ್ಧಿಗೋಪ್ಠಿಯಲ್ಲಿ ಬೆಳಪು ಸಿಎ ಬ್ಯಾಂಕ್ ಕಾರ್ಯ ನಿರ್ವಹಾಣಾಧಿಕಾರಿ ಸುಲೋಚನ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *