×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಟಪಾಡಿ ಗ್ರಾ. ಪಂ ಸದಸ್ಯ ಈಶ್ವರ್ ಬಿಜೆಪಿ ಸೇರ್ಪಡೆ

ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಬ್ಲಾಕ್ ಕಾಂಗ್ರೆಸ್ ದಕ್ಷಿಣ ವಲಯ ಉಪಾಧ್ಯಕ್ಷ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಅಶೋಕ್ ರಾವ್ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ ಇಂದು ದಿನಾಂಕ 28-08-2023 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಮೂಡಬೆಟ್ಟು ಶಕ್ತಿ ಕೇಂದ್ರದ ನಿತಿನ್ ಮತ್ತು ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *