×
Our website is made possible by displaying online advertisements to our visitors. Please consider supporting us by whitelisting our website.
  • 9880645340

ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ ಪೂರ್ವ ಸಿದ್ಧತಾ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸಿ.ಟಿ ರವಿ ಅವರ ನೇತೃತ್ವದಲ್ಲಿ ಇಂದು ದಿನಾಂಕ 16-09-2023 ರಂದು ನಡೆದ “ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ” ಪೂರ್ವ ಸಿದ್ಧತಾ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರು, ಶಾಸಕರಾದ ಸುನಿಲ್ ಕುಮಾರ್, ಮಾಜಿ ಸಚಿವರು, ವಿಧಾನಸಭಾ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಕಲ್ಮಾಡಿ, ಸದಾನಂದ ಉಪ್ಪಿನಕುದ್ರು ಹಾಗೂ ಪಕ್ಷದ ಹಿರಿಯರು, ಮುಖಂಡರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *