×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪೊಲಿಪು 20ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಶ್ರೀ ಗಣೇಶೋತ್ಸವ ಸಮಿತಿ, ಪೊಲಿಪು ಇದರ 20 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಲುವಾಗಿ ಇಂದು ದಿನಾಂಕ 18-09-2023 ರಂದು ಹಮ್ಮಿಕೊಳ್ಳಲಾದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಪದವೀಧರರಾದ ರಕ್ಷಿತಾ ಜೆ. ಮೆಂಡನ್ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭಾ ಸದಸ್ಯರಾದ ರಾಧಿಕಾ ಎಸ್. ಸುವರ್ಣ, ಕಿರಣ್ ಆಳ್ವ, ಪೊಲಿಪು ಮೊಗವೀರ ಮಹಾಸಭಾ ಅಧ್ಯಕ್ಷರಾದ ಶ್ರೀಧರ್ ಕಾಂಚನ್, ಪೊಲಿಪು ಮಹಿಳಾ ಮಂಡಳಿ ಅಧ್ಯಕ್ಷರಾದ ಕವಿತಾ ಸುವರ್ಣ, ಪೊಲಿಪು ಸರ್ಕಲ್ ಫ್ರೆಂಡ್ಸ್ ಅಧ್ಯಕ್ಷರಾದ ಪರಶೋತ್ತಮ ಪುತ್ರನ್, ಪೊಲಿಪು ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಧನಂಜಯ್ ಎಸ್. ಸಾಲ್ಯಾನ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *