×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ: ಭಾರತದ ಹೊಸ ಸಂಸತ್ನಲ್ಲಿ ಕಲಾಪದ ಮೊದಲ ದಿನ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಸ್ವಾಗತಾರ್ಹ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ

ಭಾರತದ ಹೊಸ ಸಂಸತ್ನಲ್ಲಿ ಕಲಾಪದ ಮೊದಲ ದಿನವಾದ ಮಂಗಳವಾರ ಮಹಿಳಾ ಮೀಸಲಾತಿ ಮಸೂದೆ ಮಂಡನೆ ಆಗಿರುವುದು ಸ್ವಾಗತಾರ್ಹ ಸಂಗತಿ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಮಸೂದೆ ಕಡೆಗೂ ಮಂಡನೆಯಾಗಿದ್ದು, ಇದರಿಂದ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚು ಶಕ್ತಿ ಬಂದಂತಾಗಿದೆ ಎಂದಿದ್ದಾರೆ.
ಕಳೆದ 27 ವರ್ಷಗಳಲ್ಲಿ ಹಲವಾರು ಬಾರಿ ಮಸೂದೆಯನ್ನು ಮಂಡಿಸಲಾಗಿತ್ತು, ಆದರೆ ಪದೇ ಪದೇ ಅದಕ್ಕೆ ತಡೆಯೊಡ್ಡಲಾಗಿತ್ತು. ಮಹಿಳಾ ಮೀಸಲಾತಿ ಮಸೂದೆಗೆ ಶ್ರಮಿಸಿದ ಈ ಹಿಂದಿನ ಎಲ್ಲಾ ಸರಕಾರಗಳ ಪ್ರಯತ್ನದಿಂದಾಗಿ ಇದೀಗ ಸಂಸತ್ ಕಲಾಪದಲ್ಲಿ ಮಸೂದೆಯನ್ನು ಮಂಡಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಮಹಿಳಾ ಪ್ರತಿನಿಧಿಗಳು ಲೋಕಸಭೆ, ವಿಧಾನಸಭೆಗೆ ಆಯ್ಕೆಯಾಗಲು ಎಲ್ಲ ಪಕ್ಷಗಳ ಸಹಕಾರ ಅಗತ್ಯ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *