×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ಉದ್ಘಾಟನೆ – ಪೋಷಣ್ ಅಭಿಯಾನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೊಂಡ ಕೊಠಡಿಯ ಉದ್ಘಾಟನೆಯನ್ನು ಇಂದು ದಿನಾಂಕ 21-09-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಶಿಶು ಅಭಿವೃದ್ಧಿ ಯೋಜನೆ, ಉಡುಪಿ, ಪುರಸಭೆ, ಕಾಪು, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕಾಪು ಸಹಯೋಗದೊಂದಿಗೆ ಆಯೋಜಿಸಿದ “ಪೋಷಣ್ ಅಭಿಯಾನ ಪೋಷಣ್ ಮಾಸಾಚರಣೆ ಸಪ್ಟೆಂಬರ್ – 2023” ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಪುರಸಭಾ ಸದಸ್ಯರಾದ ನಾಗೇಶ್, ಉದ್ಯಮಿಗಳಾದ ಯೋಗೀಶ್ ಶೆಟ್ಟಿ ಬಾಲಾಜಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಕೃಷ್ಣ, ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಶ್ರೀನಿವಾಸ್ ರಾವ್, ಮಧುಕರ್, ಆರೋಗ್ಯ ಕ್ಷೇತ್ರಾಧಿಕಾರಿಗಳಾದ ಚಂದ್ರಕಲಾ, ಶಾಲೆಯ ಮುಖ್ಯ ಶಿಕ್ಷಕರಾದ ಸವಿತಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *