×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರೂ. 10 ಲಕ್ಷ ಅನುದಾನದಲ್ಲಿ ನಿರ್ಮಿಸಿರುವ ಕುತ್ಯಾರು ಅಂಗನವಾಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಜಿಲ್ಲಾ ಪಂಚಾಯತ್ ಉಡುಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಉಡುಪಿ, ಗ್ರಾಮ ಪಂಚಾಯತ್ ಕುತ್ಯಾರು ಇವರ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು 10 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಿಸಲಾದ ಕುತ್ಯಾರು ಅಂಗನವಾಡಿಯನ್ನು ಇಂದು ದಿನಾಂಕ 27-09-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಉಪಾಧ್ಯಕ್ಷರಾದ ಭಾರತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶ್ಯಾಮಲ ಸಿ.ಕೆ, ಶಿಶು ಅಭಿವೃದ್ಧಿ ಇಲಾಖೆಯ ಕುಮಾರ್ ನಾಯ್ಕ್, ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಲತಾ ಆಚಾರ್ಯ, ಧೀರಜ್ ಶೆಟ್ಟಿ, ಹಾಗೂ ಕುತ್ಯಾರು ನವೀನ್ ಶೆಟ್ಟಿ, ಕುತ್ಯಾರು ಪ್ರಸಾದ್ ಶೆಟ್ಟಿ, ಕುತ್ಯಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರಜನಿ ಭಟ್, ಅಂಗನವಾಡಿ ಮೇಲ್ವಿಚಾರಕರಾದ ಪೂರ್ಣಿಮಾ, ಮುಖ್ಯೋಪಾಧ್ಯಾಯರಾದ ಶರ್ಮಿಳಾ, ಬಾಲ ವಿಕಾಸ ಸಮಿತಿಯ ಸುಪ್ರಿತಾ ಹಾಗೂ ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *