×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಡುಬಿದ್ರಿ : ಬಂಟರ ಸಂಘದ ಪ್ರಾಯೋಜಕತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಪಡುಬಿದ್ರಿ : ಇಲ್ಲಿನ ಬಂಟರ ಸಂಘ, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ “ಸಿರಿಮುಡಿ ದತ್ತಿನಿಧಿ” ಬಂಟರ ಸಂಘ ಪಡುಬಿದ್ರಿ ಇದರ ಪ್ರಾಯೋಜಕತ್ವದಲ್ಲಿ ರವಿವಾರ ಪಡುಬಿದ್ರಿ ಬಂಟರ ಭವನದ ಆಶಾ ಪ್ರಕಾಶ ಶೆಟ್ಟಿ ಸಭಾಭವನದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜರಗಿತು. ಕಾರ್ಯಕ್ರಮವನ್ನು ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಕಿಶೋರ ಆಳ್ವ ಉದ್ಘಾಟಿಸಿದರು. ಹೇರಂಬ ಇಂಡಸ್ಟ್ರೀಸ್ ಮಾಲಕರಾದ ಕನ್ಯಾನ ಸದಾಶಿವ ಶೆಟ್ಟಿಯವರು ಕ್ರೆಡಿಟ್ ಕೋ ಆಪರೇಟಿವ್ ಗೆ ಚಾಲನೆ ನೀಡಿದರು. ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅಶಕ್ತರಿಗೆ ನೆರವು ವಿತರಿಸಿದರು. ಮುಂಬಯಿಯ ಉದ್ಯಮಿ ಎಲ್ಲೂರಿನ ಪ್ರವೀಣ ಭೋಜ ಶೆಟ್ಟಿಯವರಿಂದ ಬಂಟಾಶ್ರಯಕ್ಕೆ ಚಾಲನೆ ನೀಡಿದರು. ಕೆ.ಎಮ್.ಇಂಡಸ್ಟ್ರೀಸ್ ಮಾಲಕರಾದ ಕೆ.ಎಂ ಶೆಟ್ಟಿ ವಿದ್ಯಾರ್ಥಿವೇತನ ವಿತರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಬಂಟರ ಸಂಘ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಗುರ್ಮೆ ಸುರೇಶ ಶೆಟ್ಟಿಯವರನ್ನು ಸಮಾಜದ ವತಿಯಿಂದ ಅಭಿನಂದಿಸಲಾಯಿತು. ಪ್ರವೀಣ್ ಭೋಜ ಶೆಟ್ಟಿ, ಹುಬ್ಬಳ್ಳಿಯ ಉದ್ಯಮಿ ರಾಜೇಂದ್ರ ಶೆಟ್ಟಿ ವಿವಿಧ ಗಣ್ಯರನ್ನು ಗೌರವಿಸಿದರು. ಮುಂಬಯಿ ಬಂಟರ ಸಂಘದ ಅಧ್ಯಕ್ಷ ಎರ್ಮಾಳು ಚಂದ್ರಹಾಸ ಶೆಟ್ಟಿ, ಮುಂಬೈ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಸಿ.ಎ. ಸುರೇಂದ್ರ ಶೆಟ್ಟಿ, ಸಿರಿಮುಡಿ ದತ್ತಿ ನಿಧಿ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿ, ಬಂಟ್ಸ್ ವೆಲ್ಫೇರ್ ಟ್ರಸ್ಟ್‌ನ ಅಧ್ಯಕ್ಷರಾದ ಎರ್ಮಾಳು ಶಶಿಧರ ಶೆಟ್ಟಿ, ಸಂಘದ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕೋಶಾಧಿಕಾರಿ ರವಿ ಶೆಟ್ಟಿ ಗುಂಡ್ಲಾಡಿ, ಯುವ ವಿಭಾಗದ ಅಧ್ಯಕ್ಷ ನವೀನ್ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಅಧ್ಯಕ್ಷ ಜಯ ಶೆಟ್ಟಿ ಪದ್ರ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *