ಕಟಪಾಡಿ ಗ್ರಾಮ ಪಂಚಾಯತ್ ನ ಕಾಂಗ್ರೆಸ್ ಬೆಂಬಲಿತ ಸದಸ್ಯರು ಹಾಗೂ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ(ದ)ಯ ಉಪಾಧ್ಯಕ್ಷರಾಗಿದ್ದ ಆಶೋಕ್ ರಾವ್‌ರವರು ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಅಧ್ಯಕ್ಷ/ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವದ್ದು. ಬಿ.ಜೆ.ಪಿಯ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಜೊತೆಗೆ ಇನ್ನೂರ್ವ ಕಾಂಗ್ರೆಸ್ ಬೆಂಬಲಿತ ಸದಸ್ಯ ಈಶ್ವರ್ ಎಂಬವರನ್ನು ಪಕ್ಷದ ನೀತಿ ನಿಯಮಗಳಿಗೆ ವಿರುದ್ಧವಾದ ಇವರ ಈ ನಡೆಯನ್ನು ಪಕ್ಷ ವಿರೋಧಿ ಚಟುವಟಿಕೆಯೆಂದು ಪರಿಗಣಿಸಿ ಪಕ್ಷದ ಪದಾಧಿಕಾರಿ ಹುದ್ದೆಯಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ. ನವೀನ್ ಚಂದ್ರ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

