ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವೈಭವದ ಉಚ್ಚಿಲ ದಸರಾಕ್ಕೆ ಭಾನುವಾರ ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಉಚ್ಚಿಲ ದಸರಾ ಉಡುಪಿಯ ಸಂಭ್ರಮದ ಹಬ್ಬವಾಗಲಿ ಸರಕಾರದಿಂದಲೂ ಅನುದಾನದ ಸಹಾಯ ನೀಡಲಾಗಿದೆ. ದಸರಾ ದೇಶದಾದ್ಯಂತ ನಡೆಯುತ್ತಿದೆ. ನಾಡಿಗೆ ಸುಖ ಸಮದ್ಧಿ ಜನರು ಸುಖ ಸಂತೋಷದಿಂದ ಇರಲಿ ಎಂದು ಶುಭಹಾರೈಸಿದರು. ಈ ಸಂದರ್ಭ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಸಹಾಯಕ ಕಮೀಷನರ್ ರಶ್ಮಿ ಎಸ್. ಆರ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕಾಪು ತಹಶೀಲ್ದಾರ್ ನಾಗರಾಜ ನಾಯ್ಕಡ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಕಿದಿಯೂರು ಹೋಟೆಲ್ ಪ್ರೈಲಿ. ನ ಆಡಳಿತ ನಿರ್ದೇಶಕ ಭುವನೇಂದ್ರ ಕಿದಿಯೂರು, ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾರಾಣಿ, ನಾಲ್ಕು ಪಟ್ಟ ಮೊಗವೀರ ಮಹಾಸಭಾದ ಅಧ್ಯಕ್ಷೆ ಸುಗುಣ ಕರ್ಕೇರ ಉಪಸ್ಥಿತರಿದ್ದರು. ಡಾ. ಜಿ. ಶಂಕರ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಸತೀಶ್ ಅಮೀನ್ ಪಡುಕೆರೆ ಕಾರ್ಯಕ್ರಮ ನಿರೂಪಿಸಿದರು.


