×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಜಿಲ್ಲಾಡಳಿತ ವತಿಯಿಂದ ಜನತಾ ದರ್ಶನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಸಹಯೋಗದೊಂದಿಗೆ ಇಂದು ದಿನಾಂಕ 16-10-2023 ರಂದು ಕಾಪು ಆಡಳಿತ ಸೌಧದಲ್ಲಿ ಆಯೋಜಿಸಲಾದ “ಜನತಾ ದರ್ಶನ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಅಡಿ ಮಂಜೂರಾದ ಆದೇಶ ಪತ್ರ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಅಡಿ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಸಹಾಯಕ ಆಯುಕ್ತರಾದ ರಶ್ಮಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಉದಯ್ ನಾಯಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್. ಸಿದ್ದಲಿಂಗಪ್ಪ, ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *