×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಸ.ಪ.ಪೂ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಉಡುಪಿ ಇದರ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್) ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಇಂದು ದಿನಾಂಕ 18-10-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಶಾಸಕರು ಮಾತನಾಡಿ ವಿದ್ಯಾರ್ಥಿಗಳಿಗೆ ಪ್ರತಿಯೊಂದು ಕ್ಷಣವು ಅಮೂಲ್ಯವಾದದ್ದು, ಸವಾಲುಗಳನ್ನು ಎದುರಿಸಿ ಗೆಲುವು ಸಾಧಿಸಬೇಕು ಅಸಾಧ್ಯವಾದದ್ದು ಯಾವುದು ಇಲ್ಲ ಎಂದು ಹೇಳಿದ ಅವರು ಪರೀಕ್ಷೆಯಲ್ಲಿ ಸೋತರೆ ಚಿಂತಿಸಬೇಡಿ ಆದರೆ ಬದುಕಿನಲ್ಲಿ ಸೋಲಬೇಡಿ ಎಂದರು. ಈ ಸಂದರ್ಭದಲ್ಲಿ ಅಲೆವೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಕಾಂತ್ ನಾಯಕ್, ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು ಪೊಷಕರ ಸಮಿತಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿಗಾರ್, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಶಿಕ್ಷಣ ಉಪ ನಿರ್ದೇಶಕರಾದ ಮಾರುತಿ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಲೀಲಾಬಾಯಿ ಭಟ್, ಸಮಾಜಶಾಸ್ತ್ರ ಉಪನ್ಯಾಸಕರಾದ ಕೃಷ್ಣಾನಂದ, ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾಧಿಕಾರಿಗಳಾದ ಪರಮೇಶ್ವರ ಹಾಗೂ ಶಿಬಿರಾರ್ಥಿಗಳು ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *