×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉದ್ಯಾವರ ಶ್ರೀ ನಾರಾಯಗುರು ಸಭಾಭವನ ಶಿಲಾನ್ಯಾಸ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ ಶೆಟ್ಟಿ ಭಾಗಿ

ಉದ್ಯಾವರ ಬಿಲ್ಲವ ಮಹಾಜನ ಸಂಘ (ರಿ.) ಶ್ರೀ ನಾರಾಯಣಗುರು ಸಮುದಾಯದ ಭವನ ನಿರ್ಮಾಣ ಸಮಿತಿ ವತಿಯಿಂದ ಇಂದು ದಿನಾಂಕ ಉದ್ಯಾವರ ಶಾಂತಿನಗರದಲ್ಲಿ ಆಯೋಜಿಸಲಾದ “ಶ್ರೀ ನಾರಾಯಣಗುರು ಸಭಾಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಕಾಪು ಬಿಲ್ಲವ ಸೇವಾ ಸಂಘದ ಗೌರವಾಧ್ಯಕ್ಷರಾದ ಪ್ರಭಾಕರ ಪೂಜಾರಿ, ಉದ್ಯಾವರ ಬಿಲ್ಲವ ಮಹಾಜನ ಸಂಘದ ಅಧ್ಯಕ್ಷರಾದ ಸತೀಶ್ ಕೋಟ್ಯಾನ್, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲತಿ, ಉದ್ಯಾವರ ಹಲೀಮ ಸಾಬ್ಜು ಆಡಿಟೋರಿಯಂ ಮ್ಯಾನೇಜಿಂಗ್ ಟ್ರಸ್ಟಿಗಳಾದ ಹಾಜಿ ಅಬ್ದುಲ್ ಜಲೀಲ್ ಸಾಹೇಬ್, ಬೊಳ್ಜೆ ಶ್ರೀ ಬ್ರಹ್ಮಬೈದರ್ಕಳ ಗರೋಡಿ ಅಧ್ಯಕ್ಷರಾದ ದಿನೇಶ್ ಎಂ. ಸಾಲ್ಯಾನ್, ಉದ್ಯಾವರ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಲಾರೆನ್ಸ್ ಡೇಸ, ವಿಜಯ್ ಸುವರ್ಣ ಉದ್ಯಾವರ ಹಾಗೂ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರು, ಉದ್ಯಾವರ ಬಿಲ್ಲವ ಮಹಾಜನ ಸಂಘ ಹಾಗೂ ಸಮುದಾಯದ ಭವನ ನಿರ್ಮಾಣ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *