×
Our website is made possible by displaying online advertisements to our visitors. Please consider supporting us by whitelisting our website.
  • 9880645340

ನೇಜಾರು ನಲ್ಲಿ ನಡೆದ ಅಮಾನವೀಯ ಕೊಲೆ ಘಟನೆ ಮನುಷ್ಯತ್ವವನ್ನು ಮರೆ ಮಾಚುವಂತಾಗಿದೆ – ರಮೀಜ್ ಹುಸೇನ್

ಉಡುಪಿ ನೇಜಾರು ನಲ್ಲಿ ನಡೆದ ಅಮಾನವೀಯ ಕೊಲೆ ಘಟನೆ ಮನುಷ್ಯತ್ವವನ್ನು ಮರೆ ಮಾಚುವಂತಾಗಿದೆ..ಜಿಲ್ಲೆಯಲ್ಲಿ ನಡೆದ ಈ ಕೂಲೆ ಘಟನೆ ಏಲ್ಲಾರನ್ನು ನಿಬ್ಬೆರಾ‌ಗುವಂತೆ ಮಾಡಿದೆ. ತಾಯಿ ಮಕ್ಕಳನ್ನು ಕೂಂದು ಮರೆಯಾದ ಕೂಲೆಗಾರನನ್ನು ಅದಷ್ಟು ಬೇಗ ಬಂಧಿಸಿ ನ್ಯಾಯ ಒದಗಿಸ ಬೇಕು.‌ಈ ಘಟನೆಯನ್ನು ವಿಶೇಷವಾಗಿ ಪರಿಗಣಿಸಿ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿಯವರು ನೇತೃತ್ವ ವಹಿಸಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ದೇಶ ಜನ ದೀಪಾವಳಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಬೆಳ್ಳಂಬೆಳಿಗ್ಗೆ ಒಂದೇ ಮನೆಯ ತಾಯಿ ಹಾಗು ಮೂರು ಮಕ್ಕಳನ್ನು ಕೊಂದು ಹಾಕಿದ್ದು ದುಖಕರವಾಗಿದೆ..ಈ ಘಟನೆಯಿಂದ ಜಿಲ್ಲೆಯ ಜನತೆ ದುಖಿಸುವಂತೆ ಮಾಡಿದೆ.‌ ಮನುಷ್ಯನ ಜೀವಕ್ಕೆ ಬೆಲೆ ಇಲ್ಲದ ರೀತಿಯಾಗಿದ್ದು ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ.ಘಟನೆ ನಡೆದು ಎರಡು ದಿನ ಕಳೆದರೂ ಆರೋಪಿ ಪತ್ತೆಯಾಗದಿರುವುದರಿಂದ ಈ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಕೂಲೆಗಾರನನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯ ಒದಗಿಸಿ, .ಮುಂದೆ ಈ ರೀತಿಯ ಘಟನೆಯ ನಡೆಯದಂತೆ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು ಎಂದು ಸರಕಾರಕ್ಕೆ ಮನವಿ ಸಲ್ಲಿಸುತೇನೆ. ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ‌ರಮೀಜ್ ಹುಸೇನ್ ಪ್ರತಿಕಾ ಹೇಳಿಕೆ ನೀಡಿರುತ್ತಾರೆ

Leave a Reply

Your email address will not be published. Required fields are marked *