ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಬಿಜೆಪಿ ತೊರೆದು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೂ ಕೂಡ ಇವರೇ ಆಗುಎಲ್ಲ ಸಾಧ್ಯತೆ ಇದೆ. ಕಾಂಗ್ರೆಸ್ ಪಕ್ಷಕ್ಕೆ ಮರಳುತ್ತಿರುವ ಹೆಗ್ಡೆಯವರೇ ಖಚಿತಪಡಿಸಿದ್ದಾರೆ. ಬ್ರಹ್ಮಾವರ ಕ್ಷೇತ್ರದಿಂದ ಗೆದ್ದು ಉಡುಪಿ ಜಿಲ್ಲೆಯ ಮೊದಲ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ ಅವರು, ಅನಂತರ ಕಾಂಗ್ರೆಸ್ ಸೇರಿ 2012ರಲ್ಲಿ ನಡೆದ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದು ಸಂಸದರಾಗಿದ್ದರು

