×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಲೋಕಸಭಾ ಚುನಾವಣೆ​ ಡೇಟ್​ ಅನೌನ್ಸ್ಏಪ್ರಿಲ್​​​​ 19ರಿಂದ ಮೊದಲ ಹಂತದ ವೋಟಿಂಗ್​​; ಜೂನ್​​ 4ಕ್ಕೆ ಫಲಿತಾಂಶ!ಒಟ್ಟು 7 ಹಂತಗಳಲ್ಲಿ ಮತದಾನ

ನವದೆಹಲಿ: ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಕೇಂದ್ರ ಚುನಾವಣಾ ಆಯೋಗ ಎಲೆಕ್ಷನ್​ ಡೇಟ್​ ಅನೌನ್ಸ್​ ಮಾಡಿದ್ದು, ಈ ಸಲವೂ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಈ ಕುರಿತು ಇನ್ನೇನು ಕೆಲವೇ ಕ್ಷಣಗಳಲ್ಲಿ ಗೆಜೆಟ್​ ಅಧಿಸೂಚನೆ ಹೊರಬೀಳಲಿದೆ. ಮೊದಲ ಹಂತದ ಮತದಾನ ಏಪ್ರಿಲ್​ 19ನೇ ತಾರೀಕು ನಡೆಯಲಿದ್ದು, ಜೂನ್​​ 4ರಂದು ಫಲಿತಾಂಶ ಬರಲಿದೆ ಎಂದರು. ಇನ್ನು, ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಜಗತ್ತಿನ ಅತೀ ದೊಡ್ಡ ಮತದಾನಕ್ಕೆ ಭಾರತ ಸಿದ್ಧವಾಗಿದೆ. ಈ ಬಾರಿ 97 ಕೋಟಿಗೂ ಹೆಚ್ಚು ಜನ ಮತದಾನ ಮಾಡಲಿದ್ದಾರೆ. ಸುಮಾರು ಸುಮಾರು 11 ಲಕ್ಷ ಆಸುಪಾಸು ಮತಗಟ್ಟೆಗಳಲ್ಲಿ ವೋಟಿಂಗ್​ ಆಗಲಿದೆ. 1.5 ಕೋಟಿ ಸಿಬ್ಬಂದಿ ಮತಗಟ್ಟೆ ನಿರ್ವಹಣೆ ಮಾಡಲಿದ್ದಾರೆ. ಈ ಬಾರಿ 49.7 ಕೋಟಿ ಪುರುಷ ಮತದಾರರು, 47.1 ಕೋಟಿ ಮಹಿಳಾ ಮತದಾರರು ಇದ್ದಾರೆ. 19 ಕೋಟಿಗೂ ಹೆಚ್ಚು ಯುವ ಮತದಾರರು ಇದ್ದು, 1.8 ಕೋಟಿ ಮತದಾರರು ಮೊದಲ ಬಾರಿಗೆ ವೋಟ್​ ಮಾಡಲಿದ್ದಾರೆ. ಅದರಲ್ಲೂ 48 ಸಾವಿರ ಮಂಗಳ ಮುಖಿ ವೋಟರ್ಸ್​​, 82 ಲಕ್ಷ 85 ವರ್ಷಕ್ಕೂ ಹೆಚ್ಚು ಮೇಲ್ಪಟ್ಟ ಮತದಾರರು, 2.18 ಲಕ್ಷ 100 ವರ್ಷ ಪೂರೈಸಿದವರು, 89 ಲಕ್ಷ ವಿಶೇಷ ಚೇತನ ಮತದಾರರು ಇದ್ದಾರೆ ಎಂದರು. ಪ್ರಜಾಪ್ರಭುತ್ವದ ಹಬ್ಬಕ್ಕೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿ ಷರಾ ಬರೆದಿದೆ. ಈ ಮೂಲಕ ಇಂದಿನಿಂದ ಲೋಕಸಭೆ ಚುನಾವಣೆಯ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ. ಮೊದಲ ಹಂತದ ಮತದಾನ ಏಪ್ರಿಲ್​ 19ನೇ ತಾರೀಕು ನಡೆಯಲಿದ್ದು, ಜೂನ್​​ 4ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಯಾವಾಗ ಚುನಾವಣೆ..? ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಏಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಮೇ 7 ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಜೂನ್ 4 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ

Leave a Reply

Your email address will not be published. Required fields are marked *