×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭೆ ಚುನಾವಣೆ? ನಿಮ್ಮ ಕ್ಷೇತ್ರದಲ್ಲಿ ಯಾವಾಗ ಮತದಾನ? ಸಂಪೂರ್ಣ ಮಾಹಿತಿ ಇಲ್ಲಿದೆ

ನವದೆಹಲಿ, ಮಾರ್ಚ್​ 16: ಕೇಂದ್ರ ಚುನಾವಣಾ ಆಯೋಗದ (Election Commission of India) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದರು. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ (Model Code of Conduct) ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ಮತ್ತೊಂದೆಡೆ, ಲೋಕಸಭೆ ಚುನಾವಣೆಗೆ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಚುನಾವಣಾ ದಿನಾಂಕ ಪ್ರಕಟವಾದ ದಿನವೇ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಪ್ರಚಾರ ಕಹಳೆ ಮೊಳಗಿಸಿದ್ದಾರೆ.

ಏಪ್ರಿಲ್ 26, ಮೇ 7ರಂದು ಮತದಾನ
ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಕರ್ನಾಟಕ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 26ಕ್ಕೆ ಎಲ್ಲೆಲ್ಲಿ ಮತದಾನ?
ಚಿತ್ರದುರ್ಗ ಉಡುಪಿ-ಚಿಕ್ಕಮಗಳೂರು ದಕ್ಷಿಣ ಕನ್ನಡ ಹಾಸನ ತುಮಕೂರು ಚಿಕ್ಕಬಳ್ಳಾಪುರ ಕೋಲಾರ ಮಂಡ್ಯ ಮೈಸೂರು-ಕೊಡಗು ಚಾಮರಾಜನಗರ ಬೆಂಗಳೂರು ಗ್ರಾಮಾಂತರ ಬೆಂಗಳೂರು ದಕ್ಷಿಣ ಬೆಂಗಳೂರು ಉತ್ತರ ಬೆಂಗಳೂರು ಕೇಂದ್ರ ಮೇ 7ರಂದು ಎಲ್ಲೆಲ್ಲಿ ಮತದಾನ? ಬೆಳಗಾವಿ ಬಳ್ಳಾರಿ ಚಿಕ್ಕೋಡಿ ಹಾವೇರಿ-ಗದಗ ಕಲಬುರಗಿ ಬೀದರ್​ ಹುಬ್ಬಳಿ – ಧಾರವಾಡ ಕೊಪ್ಪಳ ರಾಯಚೂರು
ಉತ್ತರ ಕನ್ನಡ ದಾವಣಗೆರೆ ಶಿವಮೊಗ್ಗ ಬಾಗಲಕೋಟೆ ವಿಜಯಪುರ

Leave a Reply

Your email address will not be published. Required fields are marked *