×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವರಿಷ್ಠರ ಸಮ್ಮುಖದಲ್ಲಿ ಬಿಜೆಪಿಗೆ ಮರಳಿದ – ಜನಾರ್ದನ ರೆಡ್ಡಿ,

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಯವರು ಮತ್ತೆ ಕಮಲವನ್ನು ಅಪ್ಪಿಕೊಂಡಿದ್ದಾರೆ. ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ಜನಾರ್ದನ ರೆಡ್ಡಿಯವರು ಪಕ್ಷಕ್ಕೆ ಸೇರ್ಪಡೆಗೊಂಡರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜ ಕೊಟ್ಟು, ಶಾಲು ಹಾಕುವ ಮೂಲಕ ಜನಾರ್ದನ ರೆಡ್ಡಿಯವರನ್ನ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ಪಕ್ಷಕ್ಕೆ ಸ್ವಾಗತಿಸಿದರು. ಇದೇ ವೇಳೆ ರೆಡ್ಡಿಯವರ ಪತ್ನಿ ಅರುಣಾ ಲಕ್ಷ್ಮಿ ಕೂಡ ಸೇರ್ಪಡೆಗೊಂಡರು. ಈ ಮೂಲಕ ಜನಾರ್ದನ ರೆಡ್ಡಿಯವರು ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸಿದರು. ರೆಡ್ಡಿಯವರು ಪಕ್ಷ ಸೇರ್ಪಡೆ ಹಿನ್ನೆಲೆಯಲ್ಲಿ ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ಕೂಡ ಆಗಮಿಸಿದ್ದರು.

Leave a Reply

Your email address will not be published. Required fields are marked *