×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ

ಬೆಳ್ತಂಗಡಿ: ಕಾಂಗ್ರೆಸ್’ನ ಲೋಕಸಭಾ ಚುನಾವಣಾ ಕಚೇರಿಯನ್ನು ಬೆಳ್ತಂಗಡಿ ಹೇರಾಜೆ ಕಾಂಪ್ಲೆಕ್ಸ್’ನಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಚುನಾವಣಾ ಉಸ್ತುವಾರಿ ರಮಾನಾಥ ರೈ ಉದ್ಘಾಟಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಬೆಳ್ತಂಗಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *