ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಇದರ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಇಂದು ದಿನಾಂಕ 30-03-2024 ರಂದು ಕಾಪು K1 ಹೋಟೆಲ್ನಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ದಾಖಲೆಗಳ ಮತಗಳ ಅಂತರದಲ್ಲಿ ಗೆಲ್ಲಿಸಲು ನಾವೆಲ್ಲರೂ ಕಟಿಬದ್ಧರಾಗೋಣ ಎಂದರು.


