×
Our website is made possible by displaying online advertisements to our visitors. Please consider supporting us by whitelisting our website.
  • 9880645340

ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.ದ.ಕ. ಲೋಕಸಭಾ ಕ್ಷೇತ್ರ ರಂಗೇರಿದ ಚುನಾವಣಾ ರಣಕಣ :ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ: ಸಾವಿರಾರು ಕಾರ್ಯಕರ್ತರು ಭಾಗಿ

ಮಂಗಳೂರು: ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಅವರು ಬುಧವಾರ ನಾಮಪತ್ರ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ ಅವರು, ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಕಾಂಗ್ರೆಸ್ ರಾಜ್ಯ ಚುನಾವಣಾ ಉಸ್ತುವಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಜಿಲ್ಲಾ ಚುನಾವಣಾ ಉಸ್ತುವಾರಿ ಬಿ. ರಮಾನಾಥ ರೈ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೊಜಾ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಶಾಸಕ ಜೆ.ಆರ್. ಲೋಬೊ, ವಿಜಯ್ ಕುಮಾರ್ ಶೆಟ್ಟಿ, ಡಾ. ರಘು, ಇನಾಯತ್ ಆಲಿ, ರಕ್ಷಿತ್ ಶಿವರಾಮ್, ಮಿಥುನ್ ರೈ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *