ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದ. ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ(ಮೀಫ್ ) ವತಿಯಿಂದ ವಿಶಿಷ್ಟ ಸಾಧನೆ ಮಾಡಿದ ಶಿಕ್ಷಣ ಸಂಸ್ಥೆಗಳಿಗೆ, ವಿದ್ಯಾರ್ಥಿಗಳಿಗೆ ಮತ್ತು ಉಚಿತ ಅರೆ ವೈದ್ಯಕೀಯ, ತಾಂತ್ರಿಕ, ಪಿ ಯು ಸಿ ಉಚಿತ ಸೀಟ್‌ಗಳ ವಿತರಣಾ ಸಮಾರಂಭ ಮಂಗಳೂರಿನ ಪ್ರೆಸ್ಟೀಜ್ ಸ್ಕೂಲ್ ಸಭಾಂಗಣದಲ್ಲಿ ಜರಗಿತು.2024 ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ ಯಲ್ಲಿ 100 ಶೇಕಡಾ ಫಲಿತಾಂಶ ಸಾಧನೆಗೆ ಶಿರ್ವ ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಎಕ್ಸಲೆನ್ಸ್ ಅವಾರ್ಡ್ ಪ್ರಶಸ್ತಿ ಪ್ರದಾನ ಮಾಡಲಾಯಿತು ವೇದಿಕೆಯಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು. ಟಿ. ಖಾದರ್ ಫರೀದ್, ಕರ್ನಾಟಕ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಿರಿಯ ಐ. ಎ. ಎಸ್ ಅಧಿಕಾರಿ ಎಲ್. ಕೆ. ಆತಿಕ್, ಬ್ಯಾರಿ ‘ಸ್ ಸಮೂಹ ಸಂಸ್ಥೆಯ ಸಯ್ಯದ್ ಬ್ಯಾರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಖೈರುನೀಸಾ ಪ್ರಶಸ್ತಿ ಸ್ವೀಕರಿಸಿದರು

