×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉದ್ಯಾವರ ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಗೆ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ ಮತಯಾಚನೆ ಮಾಡಿದರು.

ಉದ್ಯಾವರ ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಗೆ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ. ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಭೋಜೇಗೌಡ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಾತ್ಯತೀತ ಜನತಾ ದಳದ (ಜೆಡಿಎಸ್) ಜಿಲ್ಲಾಧ್ಯಕ್ಷರಾದ ಯೋಗೀಶ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ನೈರುತ್ಯ ಪದವೀಧರ ಕ್ಷೇತ್ರದ ಸಹ ಸಂಚಾಲಕರಾದ ಶಿಲ್ಪಾ ಜಿ ಸುವರ್ಣ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯರಾದ ಶ್ಯಾಮಲ ಕುಂದರ್, ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ನಯನ ಗಣೇಶ್, ಪ್ರಾಂಶುಪಾಲರಾದ ಮಮತಾ ಕೆ.ವಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *