×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಇಂದು ದಿನಾಂಕ 27-7-2024 ರಂದು ಕಾಪು ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾದ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್,ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಶೆಟ್ಟಿ, ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಭೂಮಂಡಲ ಮಹಿಳಾ ಪೂರ್ವ ಕಾಪು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುಮಾ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ರಾಷ್ಟ್ರೀಯ ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯರಾದ ಶ್ಯಾಮಲಾ ಕುಂದರ್ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ನಿಕಟಪೂರ್ವ ಅಧ್ಯಕ್ಷರಾದ ವೀಣಾ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು, ಕಾಪು ಮಂಡಲ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *