*
*
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಇಂದು ದಿನಾಂಕ 19-08-2024 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ “ರಕ್ಷಾ ಬಂಧನ” ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಕಾಪು ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಸೋನು ಪಾಂಗಾಳ, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾದ ಕೃಷ್ಣ ರಾವ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸಮಾ ಶೆಟ್ಟಿ, ಪವಿತ್ರಾ ಶೆಟ್ಟಿ, ಕಾಪು ಮಂಡಲ ಮಂಡಲ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಸಂಧ್ಯಾ ಕಾಮತ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

