×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ವರ್ಷ 3ನೇ ಬಾರಿಯ “ಉಡುಪಿ ಉಚ್ಚಿಲ ದಸರಾ-2024″ ನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರ- ಸಹಯೋಗದೊಂದಿಗೆ ಶಾಸ್ರೋಕ್ತವಾಗಿ, ಸಾಂಪ್ರದಾಯಿಕವಾಗಿ ಹಾಗೂ ಶಿಸ್ತುಬದ್ಧವಾಗಿ ಆಚರಿಸಲು ಸಂಕಲ್ಪ ಮಾಡಲಾಗಿದೆ. ಈ ಬಾರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪೂರ್ವನಿಗದಿಯಾದ ಈ ಕಾರ್ಯಕ್ರಮವನ್ನು ನೀತಿಸಂಹಿತೆ ಉಲ್ಲಂಘನೆಯಾಗದ ರೀತಿಯಲ್ಲಿ ನಡೆಸಲಾಗುವುದು. ಶ್ರೀ ಕ್ಷೇತ್ರದ ಬ್ರಹ್ಮಕಲಶ, ದಸರಾ ಉತ್ಸವ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಾ ಬಂದಿರುವ ಉಡುಪಿ ಜಿಲ್ಲಾಡಳಿತ,ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಮಾಧ್ಯಮ ಸ್ನೇಹಿತರ ಸಂಪೂರ್ಣ ಸಹಕಾರವನ್ನು ಈ ಬಾರಿಯೂ ಬಯಸುತ್ತಿದ್ದೇವೆ. ವಿದ್ಯುದ್ದೀಪಾಲಂಕಾರ ಉದ್ಘಾಟನೆ: ದಿನಾಂಕ:02-10-2024ರ ಸಂಜೆ ಗಂಟೆ 6.30 ಪಡುಬಿದ್ರಿಯಿಂದ ಕಾಪು ಸಮುದ್ರತೀರದ ದೀಪಸ್ತಂಭದವರೆಗಿನ ವಿದ್ಯುದ್ದೀಪಾಲಂಕಾರದ ಉದ್ಘಾಟನೆ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ. ಪ್ರಾಯೋಜಕರು: ಡಾ| ಕೆ. ಪ್ರಕಾಶ್ ಶೆಟ್ಟಿ (ಅಧ್ಯಕ್ಷರು MRG ಗ್ರೂಪ್)

  • ಅಕ್ಟೋಬರ್ 3, ಗುರುವಾರ ಬೆಳಗ್ಗೆ ಘಂಟೆ 10.00ಕ್ಕೆ ಸರಿಯಾಗಿ ದಸರಾ ಉತ್ಸವದ ಉದ್ಘಾಟನೆಯು ಗಣ್ಯರು, ದಾನಿಗಳ, ಉಪಸ್ಥಿತಿಯಲ್ಲಿ ನಡೆಯಲಿದೆ.
  • ದಸರಾ ಪ್ರಯುಕ್ತ ಆಯೋಜಿಸಿರುವ ವಿವಿಧ ಮೇಳ, ಮಾಹಿತಿ ಶಿಬಿರ ಹಾಗೂ ವಸ್ತು ಪ್ರದರ್ಶನದ ಉದ್ಘಾಟನೆಯು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
  • ಬೆಳಿಗ್ಗೆ, ಗಂಟೆ 10.45 ಕ್ಕೆ ದ.ಕ. ಮೊಗವೀರ ಮಹಾಜನ ಸಂಘದ 100ನೇ ವರ್ಷದ ಸವಿನೆನಪಿಗೆ ನವೀಕರಿಸಲ್ಪಟ್ಟ ನೂತನ ಆಡಳಿತ ಕಛೇರಿಯ ಶುಭಾರಂಭ ಮಾಡಲಾಗುವುದು.

ಅಕ್ಟೋಬರ್ 3ರಿಂದ 12ರವರೆಗೆ “ಉಡುಪಿ ಉಚ್ಚಿಲ ದಸರಾ-2024″ ರ ಪ್ರಯುಕ್ತ ಪ್ರತೀದಿನ ನಡೆಯುವ ಧಾರ್ಮಿಕ ಕಾರ್ಯಕ್ರಮಗಳು:

  • ಚಂಡಿಕಾಹೋಮ,
  • ಕಲ್ಪೋಕ್ತ ಪೂಜೆ,
    •ಅನ್ನಸಂತರ್ಪಣೆ,
  • ಸಂಜೆಯ ಉಪಾಹಾರ,
  • ಧಾರ್ಮಿಕ ಸಭೆ,
    •ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ.
    ಪ್ರತೀದಿನ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು-
  • ಸ್ಥಳೀಯ ಮಹಿಳೆಯರಿಂದ ವೈವಿಧ್ಯಮಯ ಕಾರ್ಯಕ್ರಮ
  • ವಿವಿಧ ವೃತ್ತಿಪರ ತಂಡಗಳಿಂದ ಜಾದೂ ಕಾರ್ಯಕ್ರಮ, ಯಕ್ಷಗಾನ, ಭರತನಾಟ್ಯ, ಹರಿಕಥೆ, ಜಾನಪದ ನೃತ್ಯ, ನೃತ್ಯ ರೂಪಕ ಹಾಗೂ ಸಂಗೀತ ಕಾರ್ಯಕ್ರಮಗಳು ನಡೆಯಲಿದೆ.
    •”ಸಾಮೂಹಿಕ ಕುಣಿತ ಭಜನೆ: ಕರಾವಳಿ ಜಿಲ್ಲೆಗಳ 40 ಕುಣಿತ ಭಜನಾ ತಂಡಗಳಿಂದ ಏಕಕಾಲದಲ್ಲಿ ಕ್ಷೇತ್ರದ ರಥಬೀದಿಯ ಸುತ್ತ ಕುಣಿತ ಭಜನೆ.
    •ಸಾಮೂಹಿಕ ದಾಂಡಿಯಾ ನೃತ್ಯ : ದಾಂಡಿಯಾ ನೃತ್ಯ ಕಲಾವಿದರು ಹಾಗೂ ಸಾರ್ವಜನಿಕರಿಂದ ರಥಬೀದಿಯ ಸುತ್ತ ಸಾಮೂಹಿಕ ದಾಂಡಿಯಾ ನೃತ್ಯ ಕಾರ್ಯಕ್ರಮ.
  • ಶತವೀಣಾವಲ್ಲರಿ : ಏಕಕಾಲದಲ್ಲಿ 101 ವೀಣೆಗಳ ವಾದನ ಕಾರ್ಯಕ್ರಮ.

•ಲೇಸರ್ ಶೋ : ಪ್ರತೀದಿನ ರಾತ್ರಿ ಗಂಟೆ 8.00ರಿಂದ ದಸರಾ ಮಹೋತ್ಸವ ಹಾಗೂ ಶ್ರೀ ಕ್ಷೇತ್ರದ ಮಹತ್ವದ ಬಗ್ಗೆ ವಿಶೇಷ ಲೇಸರ್ ಶೋ ನಡೆಯಲಿದೆ.

. • ಡೋನ್ ಮೂಲಕ ಮಷ್ಪಾರ್ಚನೆ: ನವದುರ್ಗೆಯರಿಗೆ ಶಾರದಾ ಮಾತೆ ಹಾಗೂ ಅಂಬಾರಿ ಹೊತ್ತ ಆನೆಗೆ ಡೋನ್ ಮೂಲಕ ಪುಷ್ಪಾರ್ಚನೆ ಮಾಡುವ ಕಾರ್ಯಕ್ರಮ ಕೂಡ ವಿಶೇಷವಾಗಿ ವ್ಯವಸ್ಥೆ ಮಾಡಲಾಗಿದೆ.

•ದಸರಾ ಪ್ರಯುಕ್ತ ನಡೆಯಲಿರುವ ವಿವಿಧ ಸ್ಪರ್ಧೆಗಳು; ನೃತ್ಯ ಸ್ಪರ್ಧೆ, ಮಕ್ಕಳಿಗಾಗಿ ಶ್ರೀಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ, ಹೆಣ್ಣುಮಕ್ಕಳ ಹುಕುಣಿತ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ರಂಗೋಲಿ ಸ್ಪರ್ಧೆ,ಕುಸ್ತಿ ಸ್ಪರ್ಧೆ, ದೇಹದಾಡ್ಯ ಸ್ಪರ್ಧೆ,

ಶೋಭಾಯಾತ್ರೆ: ಅಕ್ಟೋಬರ್ 12, ಶನಿವಾರ, ಅಪರಾಹ್ನ ಗಂಟೆ 3.00

  • ಶ್ರೀ ಕ್ಷೇತ್ರದಿಂದ ಶೋಭಾಯಾತ್ರೆಯು ಹೊರಡುವ ಮಾರ್ಗ : ರಾಷ್ಟ್ರೀಯ ಹೆದ್ದಾರಿ -66 ಮೂಲಕ ಶ್ರೀ ಕ್ಷೇತ್ರ ಉಚ್ಚಿಲ- ಎರ್ಮಾಳ್- ಉಚ್ಚಿಲ-ಮೂಳೂರು-ಕಾಪು ಬೀಚ್ (ದೀಪಸ್ತಂಭ).
  • · ಈ ಸಂದರ್ಭ ಕಾಪು ದೀಪಸ್ತಂಭದ ಬಳಿ ಬೋಟುಗಳಿಂದ ಸಮುದ್ರ ಮಧ್ಯೆ ಭವ್ಯವಾದ ವಿದ್ಯುದ್ದೀಪಾಲಂಕಾರ, ಲೇಸರ್ ಶೋ, ಆಕರ್ಷಕ ಸುಡುಮದ್ದು ಪ್ರದರ್ಶನ, ಸುಮಂಗಲೆಯರಿಂದ ಸಾಮೂಹಿಕ ಮಂಗಳಾರತಿ, ಅರ್ಚಕರಿಂದ ನವದುರ್ಗೆಯರು, ಶಾರದಾಮಾತ ಹಾಗೂ ಸಮುದ್ರರಾಜನಿಗೆ ಗಂಗಾರತಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

Leave a Reply

Your email address will not be published. Required fields are marked *