×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸೇವಾ ಪಾಕ್ಷಿಕದ ಅಂಗವಾಗಿ ಕಾಪು ಮಂಡಲ ಬಿಜೆಪಿ ವತಿಯಿಂದ ಸ್ವಚ್ಛತಾ ಅಭಿಯಾನ

ಕಾಪು ಮಂಡಲ ಬಿಜೆಪಿ ವತಿಯಿಂದ “ಸೇವಾ ಪಾಕ್ಷಿಕ”ದ ಅಂಗವಾಗಿ ಇಂದು ದಿನಾಂಕ 02-10-2024 ರಂದು ಕಾಪು ಪೇಟೆಯಲ್ಲಿ ಹಮ್ಮಿಕೊಳ್ಳಲಾದ “ಸ್ವಚ್ಛತಾ ಕಾರ್ಯಕ್ರಮ” ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ನೀತಾ ಗುರುರಾಜ್ ಹಾಗೂ ಕಾಪು ಪುರಸಭಾ ಸದಸ್ಯರು, ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *