ಮಲ್ಪೆ: ಮಲ್ಪೆ ಸಮುದ್ರದಲ್ಲಿ ಬೋಟಿನಿಂದ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪಿದ್ದ ಘಟನೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮೀನುಗಾರ ಭಟ್ಕಳದ ಚಂದ್ರುಗೊಂಡ (42) ಎಂದು ತಿಳಿದು ಬಂದಿದೆ ಎರಡು ದಿನದ ಹಿಂದೆ ರಾತ್ರಿ 11-15 ವೇಳೆಯಲ್ಲಿ ಬೋಟಿನಲ್ಲಿ ಕೆಲಸ ಮಾಡಿಕೊಂಡಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಸಮುದ್ರಕ್ಕೆ ಬಿದ್ದಿದ್ದರು ಎನ್ನಲಾಗಿದೆ ತತ್ಕ್ಷಣ ಬೋಟಿನಲ್ಲಿದ್ದವರು ಹುಡುಕಾಡಿದರೂ ಪತ್ತೆಯಾಗಲಿಲ್ಲ.ಇಂದು ಬೆಳಗ್ಗೆ ಮಲ್ಪೆ ಲೈಟ್ಹೌಸ್ ಬಳಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರನ್ನು ನೇಮಕಗೊಳಿಸುವ ಪ್ರಸ್ತಾವನೆಗೆ ಎಐಸಿಸಿ ಗ್ರೀನ್ ಸಿಗ್ನಲ್ ನೀಡಿದೆ. ಇವರು ಹಲವು ದಶಕಗಳಿಂದ ಕಾಂಗ್ರೆಸ್ ಕಾರ್ಯಕರ್ತರಾಗಿ, […]
ಇಂದು 2022-23ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಹಾಗೆಯೇ ಉಡುಪಿ ಜಿಲ್ಲೆಗೆ 2 ನೇ ಸ್ಥಾನ, ಕೊಡಗಿಗೆ 3ನೇ ಸ್ಥಾನ, […]
ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ನಿದ್ರೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಡಿವೈಡ್ ರ್ ಮೇಲೇರಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಧಾರ್ಮಿಕ ಪ್ರವಾಸಿ ಕ್ಷೇತ್ರದ […]
ಕರಂಬಳ್ಳಿ ವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಮತ್ತು ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿ ಆಶ್ರಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಹಮ್ಮಿಕೊಂಡ ಜ್ಞಾನ ದೀಪುಸವೂ ವಿಜೃಂಭಣೆಯಿಂದ ಸಂಪನ್ನಗೊಂಡಿತು. ಏಳು ದಿನಗಳ ಪರ್ಯಂತ “ಸುಂದರ ಕಾಂಡ ” […]