×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಶಿಗ್ಗಾಂವಿ, ಸಂಡೂರು ಬೈ ಎಲೆಕ್ಷನ್: ಭರತ್ ಬೊಮ್ಮಾಯಿ, ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್

ಚನ್ನಪಟ್ಟಣ ಟಿಕೆಟ್​ ಕಸರತ್ತು ನಡೆದಿರುವ ಬೆನ್ನಲ್ಲೇ ಇದೀಗ ಬಿಜೆಪಿ ಹೈಕಮಾಂಡ್​ ಇಂದು ಶಿಗ್ಗಾಂವಿ ಮತ್ತು ಸಂಡೂರಿಗೆ ಬಿಜೆಪಿ ಅಭ್ಯರ್ಥಿಗಳನ್ನ ಪ್ರಕಟಿಸಲಾಗಿದೆ. ಶಿಗ್ಗಾಂವಿ ಅಭ್ಯರ್ಥಿಯಾಗಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಮತ್ತು ಸಂಡೂರು ಅಭ್ಯರ್ಥಿಯಾಗಿ ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ.  ಆದರೆ ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣದಲ್ಲಿ ಕದನ ಮತ್ತಷ್ಟು ಕುತೂಹಲ ಕೆರಳಿಸಿದೆ. ಕೊನೆಗೂ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಸಫಲರಾದ ಬೊಮ್ಮಾಯಿ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್​ಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದೆ. ಆ ಮೂಲಕ ಕೊನೆಗೂ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಬಸವರಾಜ ಬೊಮ್ಮಾಯಿ ಸಫಲರಾಗಿದ್ದಾರೆ. ಹಾವೇರಿ ಕ್ಷೇತ್ರದ ಸಂಸದರಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದರು. ಸಂಸದರಾಗಿ ಆಯ್ಕೆ ಹಿನ್ನೆಲೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿದ್ದ ಶಿಗ್ಗಾಂವಿ ಕ್ಷೇತ್ರಕ್ಕೆ ಅವರ ಪುತ್ರ ಭರತ್ ಬೊಮ್ಮಾಯಿ​ಗೆ ಟಿಕೆಟ್ ನೀಡಲಾಗಿದ್ದು, ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಸ್ಪರ್ಧಿಸುತ್ತಿದ್ದಾರೆ ಬೈಎಲೆಕ್ಷನ್​ ಮೂಲಕ ಮತ್ತೆ ಅದೃಷ್ಟ ಪರೀಕ್ಷೆಗಿಳಿದ ಬಂಗಾರು ಹನುಮಂತು ನವೆಂಬರ್ 13ರಂದು ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಂಗಾರು ಹನುಮಂತುಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಬಳ್ಳಾರಿ ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿ ಇ.ತುಕಾರಾಮ್ ಆಯ್ಕೆಯಾಗಿದ್ದರು. ಶಾಸಕ ಸ್ಥಾನಕ್ಕೆ ತುಕಾರಾಮ್ ರಾಜೀನಾಮೆ ನೀಡಿದ್ದರು. ಹೀಗಾಗಿ ಸಂಡೂರು ಕ್ಷೇತ್ರ ತೆರವಾಗಿತ್ತು. ಸಂಡೂರು ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಬಂಗಾರು ಹನುಮಂತು, ಬಿಜೆಪಿ ಎಸ್​ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಬೈಎಲೆಕ್ಷನ್​ನಲ್ಲಿ ಮತ್ತೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ

Leave a Reply

Your email address will not be published. Required fields are marked *