ಇಂದ್ರಾಳಿ ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ರಸ್ತೆ ತಡೆ, ಪ್ರತಿಭಟನೆ, ಅ.29: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ವಿರೋಧಿಸಿ ಇಂದ್ರಾಳಿ ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮಾನ ಮನಸ್ಕ ಸಂಘಟನೆಗಳು ಮಂಗಳವಾರ ಇಂದ್ರಾಳಿ ಸೇತುವೆ ಬಳಿ ಪ್ರತಿಭಟನಾ ಸಭೆ ನಡೆಸಿ ಬಳಿಕ ರಸ್ತೆ ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.ಮಿತಿ ಪ್ರಮುಖ ಅಮೃತ್ ಶೆಣೈ ಮಾತನಾಡಿ, ಸೇತುವೆ ಕಾಮಗಾರಿಯನ್ನು ಬಹುತೇಕ ಸ್ಥಗಿತಗೊಂಡು ಹಲವು ವರ್ಷಗಳು ಸಂದಿವೆ. ಇದರಿಂದ ಇಲ್ಲಿ ಅಪಘಾತಗಳಾಗಿ ಅಪಾರ ಸಾವು ನೋವು ಸಂಭವಿಸುತ್ತಿದೆ. ಅಲ್ಲದೆ ದಿನಗಟ್ಟಲೆ ಟ್ರಾಫಿಕ್ ಜಾಮ್ಗೂ ಕಾರಣವಾಗುತ್ತಿದೆ. ಇಲ್ಲಿರುವ ಶಾಲಾ ಕಾಲೇಜು, ವಿದ್ಯಾರ್ಥಿಗಳ ಜೀವಕ್ಕೂ ಅಪಾಯಕರ ಪರಿಸ್ಥಿತಿ ಉಂಟಾಗಿದೆ. ಪಾದಾಚಾರಿ ಗಳಿಗೂ ಮತ್ತು ಧಾರ್ಮಿಕ ಕೇಂದ್ರಗಳಿಗೆ ಬರುವ ಭಕ್ತಾದಿಗಳಿಗೂ, ಬೇರೆ ಬೇರೆ ಜಿಲ್ಲೆಗಳಿಂದ ಮಣಿಪಾಲ ಆಸ್ಪತ್ರೆಗೆ ಬರುವ ರೋಗಿಗಳಿಗೂ ಬಹಳ ತೊಂದರೆ ಆಗುತ್ತಿದೆ. ಒಟ್ಟಾರೆ ಈ ಕಾಮಗಾರಿ ವಿಳಂಬದಿಂದ ಉಡುಪಿಯ ಆರ್ಥಿಕತೆಗೆ ಪರೋಕ್ಷವಾಗಿ ಹೊಡೆತವಾಗಿದೆ ಎಂದು ಆರೋಪಿಸಿದರು.ಮನೋತಜ್ಞ ಡಾ.ಪಿ.ವಿ.ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಲಾವಣ್ಯ ಬಲ್ಲಾಳ್, ಕಾಂಗ್ರೆಸ್ ಮುಖಂಡರಾದ ಅಶೋಕ್ ಕುಮಾರ್ ಕೊಡವೂರು, ರಮೇಶ್ ಕಾಂಚನ್, ಪ್ರಸಾದ್ರಾಜ್ ಕಾಂಚನ್, ಹರಿಪ್ರಸಾದ್ ರೈ, ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಶಲ್ ಶೆಟ್ಟಿ, ವಿವಿಧ ಸಂಘಟನೆಗಳ ಪ್ರಮುಖ ರಾದ ಇದ್ರೀಸ್ ಹೂಡೆ, ಕೆ.ರವೀಂದ್ರ ಕಾಮತ್, ಇಫ್ತಿಕಾರ್ ಅಹ್ಮದ್, ಹುಸೇನ್ ಹೈಕಾಡಿ, ಕೊಕ್ಕರ್ಣೆ ಸುರೇಂದ್ರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಮೊದಲಾದವರು ಮಾತನಾಡಿದರು. ಸಮಿತಿಯ ಪ್ರಮುಖರಾದ ಜ್ಯೋತಿ ಹೆಬ್ಬಾರ್, ಅಬ್ದುಲ್ ಅಝೀಝ್ ಉದ್ಯಾವರ, ಬಿ.ಕುಶಲ ಶೆಟ್ಟಿ, ಅನ್ಸಾರ್ ಅಹ್ಮದ್, ಲತಾ ಆನಂದ ಶೇರಿಗಾರ್, ರಮೇಶ್ ಕಾಂಚನ್, ಚಂದ್ರಮೋಹನ್, ಸುರೇಶ್ ಶೆಟ್ಟಿ ಬನ್ನಂಜೆ, ಮಹಾಬಲ ಕುಂದರ್, ಬಿ.ಶ್ರೀಧರ್, ಕೀರ್ತಿ ಶೆಟ್ಟಿ ಅಂಬಲಪಾಡಿ, ಪೀರು ಮುಹಮ್ಮದ್, ಇಸ್ಮಾಯಿಲ್ ಆತ್ರಾಡಿ, ಅಬ್ದುಲ್ ಅಝೀಝ್, ಯಾಸೀನ್ ಮಲ್ಪೆ, ಅಲ್ಫಾನ್ಸ್ ಡಿ ಕೋಸ್ತ, ಸುಜಯ ಪೂಜಾರಿ, ಶೇಕ್ ವಾಹಿದ್, ಶಾಂತಿ ಪೀರೆರಾ, ವರೋನಿಕಾ ಕರ್ನೆಲಿಯೋ, ಗೀತಾ ವಾಗ್ಳೆ, ಅನಿತಾ ಡಿಸೋಜ, ಡಾ.ಸುನೀತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಭಟನೆಯಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಂಜಿಬೆಟ್ಟು ಡಾ.ಟಿ.ಎಂ.ಎ.ಪೈ ಶಿಕ್ಷಣ ಸಂಸ್ಥೆಯ ಬಿಎಡ್ ವಿದ್ಯಾರ್ಥಿಗಳು, ಕುಂಜಿಬೆಟ್ಟು ಬಾಳಿಗಾ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರು, ಸ್ಥಳೀಯ ವಸತಿ ಸಮುಚ್ಛಯದ ನಿವಾಸಿಗಳು ಪಾಲ್ಗೊಂಡಿದ್ದರು. ಬಳಿಕ ಸುಮಾರು 10 ನಿಮಿಷಗಳ ಕಾಲ ರಸ್ತೆಯನ್ನು ತಡೆದ ಪ್ರತಿಭಟನ ಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ತದನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಈ ಕುರಿತ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವರಿಗೆ ಸಲ್ಲಿಸಲಾಯಿತು


