×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ  ಪತ್ತೆ

ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.   ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.   ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಿಕೊಂಡಿದ್ದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿಯ ವೇಳೆ ಪತ್ತೆಯಾಗಿದೆ.   ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂ ವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *